
ನಾಡ ಬಾಂಬ್ ಸ್ಪೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸ್ಪಚ್ಛತೆ ವೇಳೆ ನಾಡಬಾಂಬ್ ಸ್ಪೋಟ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
ಸ್ವಚ್ಛತೆ ಮಾಡುವಾಗ ಕಸದ ರಾಶಿಗೆ ವಿದ್ಯಾರ್ಥಿಗಳು ಕೈ ಹಾಕುತ್ತಿದ್ದಂತೆ ನಾಡ ಬಾಂಬ್ ಸಿಡಿದಿದೆ. ಹೀಗಾಗಿ ಅವರ ಕೈಗಳಿಗೆ ಹೆಚ್ಚು ಹಾನಿಯಾಗಿವೆ.
ನಾಡಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯ ಬೆಟ್ಟದಲ್ಲಿ ಭಾನುವಾರ ನಡೆದಿದೆ.
ಹರಿಯಂತ್ ಪಾಟೀಲ್, ಪಾರ್ಥ ಗಾಯಗೊಂಡ ವಿದ್ಯಾರ್ಥಿಗಳು. ಇವರು ಜೈನಬಸದಿ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಬೆಟ್ಟದ ಮೇಲಿನ ದೇವಸ್ಥಾನ ಸ್ವಚ್ಛಗೊಳಿಸಲು ಭಾನುವಾರ ತೆರಳಿದ್ದರು. ಸ್ವಚ್ಛತೆ ಮಾಡುವಾಗ ಕಸದ ರಾಶಿಗೆ ವಿದ್ಯಾರ್ಥಿಗಳು ಕೈ ಹಾಕುತ್ತಿದ್ದಂತೆ ನಾಡ ಬಾಂಬ್ ಸ್ಫೋಟಗೊಂಡಿದೆ.
ಸ್ಫೋಟದ ತೀವ್ರತೆಗೆ ಒಬ್ಬನ ಅಂಗೈ ಛಿದ್ರಗೊಂಡಿದೆ. ಮತ್ತೊಬ್ಬನ ಮುಖದ ಭಾಗಕ್ಕೆ ಗಾಯವಾಗಿದೆ.ಕಾಡು ಹಂದಿ ಬೇಟೆಗಾಗಿ ನಾಡ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದ್ದು ಕಿಡಿಗೇಡಿಗಳ ಕೆಲಸದಿಂದ ಅಮಾಯಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ ವಿದ್ಯಾರ್ಥಿಗಳನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story