
ಮರಾಠಿ ಭಾಷಿಗರ ಹಲ್ಲೆಗೊಳಗಾದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ
https://karnataka.thefederal.com/category/karnataka/ksrtc-conductor-attacked-for-not-speaking-marathi-173080
Attack on Conductor | ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮತ್ತೊಬ್ಬನ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿತ್ತು. ಈಗ ಬಾಳೇಕುಂದ್ರಿಯ ಮೋಹನ ಹಂಚಿನಾಳ ಎಂಬಾತನನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಕನ್ನಡ ಮಾತನಾಡು ಎಂದಿದ್ದಕ್ಕೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
'ಮರಾಠಿ ಮಾತನಾಡಲು ಬರಲ್ಲ' ಎಂದು ಹೇಳಿದ್ದಕ್ಕೆ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿತ್ತು. ಈಗ ಬಾಳೇಕುಂದ್ರಿಯ ಮೋಹನ ಹಂಚಿನಾಳ ಎಂಬಾತನನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಭಾನುವಾರವೂ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಬೆಳಗಾವಿಯಿಂದ ಕೊಲ್ಲಾಪುರ, ಪುಣೆ, ಸತಾರಾ, ಮುಂಬೈ ಮತ್ತಿತರ ಕಡೆ ತೆರಳುವವರು ಬಸ್ ಸಿಗದೆ ಹೈರಾಣಾದರು. ಎರಡೂ ರಾಜ್ಯಗಳ ಸಾರಿಗೆ ಸಂಸ್ಥೆಗಳ ಬಸ್‌ಗಳು ತಮ್ಮ ಗಡಿಯವರೆಗಷ್ಟೇ ಕಾರ್ಯಾಚರಣೆ ನಡೆಸಿದವು.
ನಾಳೆ ಬೆಳಗಾವಿಗೆ ಸಚಿವ ರಾಮಲಿಂಗ ರೆಡ್ಡಿ ಭೇಟಿ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಇಲ್ಲದೇ ಪ್ರಯಾಣಿಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಸಂಸದ ಗೋವಿಂದ್ ಕಾರಜೋಳ, ಸಮಸ್ಯೆ ಬಗೆಹರಿಸಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಬೆಳವಣಿಗೆ ನಡುವೆ ನಾಳೆ ಬೆಳಗಾವಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭೇಟಿ ನೀಡಲಿದ್ದು. ಘಟನೆ ಕುರಿತು ಮಾಹಿತಿ ಪಡೆದು ಬಸ್ ಆರಂಭದ ಕುರಿತು ಕೂಡ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.
ಘಟನೆ ನಡೆದಿದ್ದು ಹೇಗೆ?
ಬೆಳಗಾವಿ ನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ಯುವಕ ಹಾಗೂ ಯುವತಿ ಬಸ್ ಹತ್ತಿದ್ದಾರೆ. ನಿರ್ವಾಹಕ ಮಹಾದೇವ್ ಹುಕ್ಕೇರಿ ಟಿಕೆಟ್ ಪಡೆಯುವಂತೆ ಕನ್ನಡದಲ್ಲಿ ಕೇಳಿದಾಗ ಯುವತಿ ಆಧಾರ್ ಕಾರ್ಡ್ ತೋರಿಸಿ ಎರಡು ಟಿಕೆಟ್ ಕೇಳಿದ್ದಾರೆ. ಆಗ ನಿರ್ವಾಹಕರು ನಿಮಗಷ್ಟೇ ಉಚಿತ ಪ್ರಯಾಣ. ಯುವಕ ಹಣ ನೀಡಿ ಟಿಕೆಟ್ ಪಡೆಯಬೇಕು ಎಂದು ಹೇಳಿದ್ದರ. ಈ ವೇಳೆ ಯುವಕ-ಯುವತಿ ನಿರ್ವಾಹಕರನ್ನು ಕನ್ನಡ ಏಕೆ ಬೊಗಳುತ್ತೀ, ಮರಾಠಿ ಕಲಿತುಕೋ. ನಮ್ಮೂರು ತಲುಪಿದ ಮೇಲೆ ನಿನ್ನನ್ನು ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಅದರಂತೆ ಸಣ್ಣ ಬಾಳೇಕುಂದ್ರಿ ಗ್ರಾಮಕ್ಕೆ ಬಸ್ ಬಂದಾಗ ಯುವಕ ಸೇರಿದಂತೆ ಗ್ರಾಮಸ್ಥರು ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದರು.