ಕ್ಯಾನ್ಸರ್‌ ಭೀತಿ | ಹೋಟೆಲ್‌ ಇಡ್ಲಿ ತಯಾರಿಕೆ; ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿದ ಸರ್ಕಾರ
x

ಕ್ಯಾನ್ಸರ್‌ ಭೀತಿ | ಹೋಟೆಲ್‌ ಇಡ್ಲಿ ತಯಾರಿಕೆ; ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿದ ಸರ್ಕಾರ

ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಪಾಸ್ಟಿಕ್‌ ಹಾಳೆ ಬಳಸಿ ತಯಾರಿಸುವ ಅಕ್ಕಿ ಮತ್ತು ರವೆ ಇಡ್ಲಿ ಕ್ಯಾನ್ಸರ್‌ ಕಾರಕವಾಗಿದ್ದು, ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟು ಮಾಡಲಿದೆ ಎಂದು ಆರೋಗ್ಯ ಇಲಾಖೆ ಅಧ್ಯಯನ ತಿಳಿಸಿದೆ.


ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಪಾಸ್ಟಿಕ್‌ ಹಾಳೆ ಬಳಸಿ ತಯಾರಿಸುವ ಅಕ್ಕಿ ಮತ್ತು ರವೆ ಇಡ್ಲಿ ಕ್ಯಾನ್ಸರ್‌ ಕಾರಕವಾಗಿದ್ದು, ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟು ಮಾಡಲಿದೆ ಎಂದು ಆರೋಗ್ಯ ಇಲಾಖೆ ಅಧ್ಯಯನ ತಿಳಿಸಿದೆ.

ಈ ಕಾರಣಕ್ಕಾಗಿ ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ.

ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51 ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಈ ಘೋಷಣೆ ಮಾಡಿದ್ದಾರೆ.

ದಿನೇಶ್ ಗುಂಡೂರಾವ್ ಹೇಳಿದ್ದೇನು?

ಸುಮಾರು 251 ತಿಂಡಿ ಹೋಟೆಲ್, ಅಂಗಡಿಗಳಿಂದ ಇಡ್ಲಿ ಮಾದರಿಗಳನ್ನು ಸ್ಯಾಂಪಲ್ಸ್ ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅವುಗಳಲ್ಲಿ ಕ್ಯಾನ್ಸರ್‌ ಕಾರಕ ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಪ್ಲಾಸ್ಟಿಕ್​ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಈ ಮೊದಲು ಹೋಟೆಲ್​ಗಳಲ್ಲಿ ಇಡ್ಲಿ ತಯಾರಿಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ ಈಗ ಹೆಚ್ಚಿನ ಕಡೆ ಹೋಟೆಲ್​ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಇದರಿಂದ ಅನಾರೋಗ್ಯಕ್ಕೆ ಕಾರಣವಾದ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಕಾರ್ಸಿನೋಜೆನಿಕ್ ಅಂಶ ಕ್ಯಾನ್ಸರ್​​ಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಆಹಾರ ಇಲಾಖೆ ಜಂಟಿಯಾಗಿ ಬೆಂಗಳೂರಿನ ವಿವಿದೆಡೆ ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿತು. 15 ದಿನಗಳ ಕಾಲ ದಾಳಿ ಮಾಡಿ 500 ಇಡ್ಲಿ ಸ್ಯಾಂಪಲ್ಸ್ ಸಂಗ್ರಹಿಸಲಾಗಿತ್ತು. ಇದರಲ್ಲಿ 35ಕ್ಕೂ ಹೆಚ್ಚು ಇಡ್ಲಿ ಎಂದು ವರದಿ ಬಂದಿದೆ. ಅಲ್ಲದೆ ಈ ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

Read More
Next Story