![Bomb Threat to KIAB | ಏರೋ ಶೋ ನಡುವೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Bomb Threat to KIAB | ಏರೋ ಶೋ ನಡುವೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ](https://karnataka.thefederal.com/h-upload/2025/02/12/512199-benglore1-1.webp)
Bomb Threat to KIAB | ಏರೋ ಶೋ ನಡುವೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಬಸವರಾಜ ಬೊಮ್ಮಾಯಿ ಅವರಿಂದ ನನ್ನ ಈ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಬೆಂಗಳೂರು, ಚೆನ್ನೈ ಅಥವಾ ಕೇರಳ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವಿಮಾನಗಳ ಮೇಲೆ ಡ್ರೋನ್ ದಾಳಿ ನಡೆಯಲಿದೆ ಎಂದು ಬೆದರಿಕೆ ಹಾಕಲಾಗಿದೆ
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನ ನಡೆಯುತ್ತಿರುವಾಗಲೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ.
‘mahanteshs6699@proton.me’ ಇಮೇಲ್ ವಿಳಾಸದಿಂದ ಫೆಬ್ರವರಿ 8 ರಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಬೆಂಗಳೂರು, ಚೆನ್ನೈ ಮತ್ತು ಕೇರಳದಲ್ಲಿ ಲ್ಯಾಂಡ್ ಆಗುವ ವಿಮಾನಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡುವಂತೆ ಇಮೇಲ್ ಕಳುಹಿಸಿದವರು ಒತ್ತಾಯಿಸಿದ್ದಾರೆ.
"ಬಸವರಾಜ ಬೊಮ್ಮಾಯಿ ಅವರಿಂದ ನನ್ನ ಈ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಬೆಂಗಳೂರು, ಚೆನ್ನೈ ಅಥವಾ ಕೇರಳ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವಿಮಾನಗಳ ಮೇಲೆ ಡ್ರೋನ್ ದಾಳಿ ನಡೆಯಲಿದೆ" ಎಂದು ಸಂದೇಶದಲ್ಲಿ ತಿಳಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ BNS ಕಾಯ್ದೆ ಸೆಕ್ಷನ್ 125, 351, 353ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಏರ್ಪೋರ್ಟ್ಗೆ ಭದ್ರತೆ ಹೆಚ್ಚಿಸಲಾಗಿದೆ.