ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಅನುಮೋದನೆ
x
ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ 

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಅನುಮೋದನೆ

18.37 ಕೋಟಿ ರೂ. ವೆಚ್ಚದಲ್ಲಿ ದೇವಾಲಯದ ಅಭಿವೃದ್ಧಿ ಕಾರ್ಯಗಳು ನಡೆಯಲಿದ್ದು, ದೇವಾಲಯವು ಯಾತ್ರಿಕರ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಳ್ಳಲಿದೆ.


ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ 'ಪ್ರಸಾದ್' ಯೋಜನೆಯಡಿ ಅನುಮೋದನೆ ನೀಡಿದೆ.

ಈ ಬಗ್ಗೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಮ್ಮ ಎಕ್ಸ್‌ ಖಾತೆಯಲ್ಲಿ ಘೋಷಣೆ ಮಾಡಿದ್ದು, ನಮ್ಮ ಪ್ರವಾಸೋದ್ಯಮ ಸಚಿವಾಲಯವು ಕರ್ನಾಟಕದ ಬೆಳಗಾವಿಯ ಸವದತ್ತಿಯಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ 'ಪ್ರಸಾದ್' ಯೋಜನೆಯಡಿಯಲ್ಲಿ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

18.37 ಕೋಟಿ ರೂ. ವೆಚ್ಚದಲ್ಲಿ ದೇವಾಲಯದ ಅಭಿವೃದ್ಧಿ ಕಾರ್ಯಗಳು ನಡೆಯಲಿದ್ದು, ದೇವಾಲಯವು ಯಾತ್ರಿಕರ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಳ್ಳಲಿದೆ. ಇದು ದೇವಾಲಯಕ್ಕೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಧನ್ಯವಾದ ಸಲ್ಲಿಸಿದ ಬಸವರಾಜ ಬೊಮ್ಮಾಯಿ

ಪ್ರಸಾದ್ ಯೋಜನೆಯಡಿಯಲ್ಲಿ ಸವದತ್ತಿ ಯಲ್ಲಮ್ಮ ಬೆಟ್ಟದ ಯಾತ್ರಾ ಸ್ಥಳದ ಅಭಿವೃದ್ಧಿಗೆ ಹಣವನ್ನು ಅನುಮೋದಿಸಿದ್ದಕ್ಕಾಗಿ ಹಾವೇರಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಪ್ರವಾಸೋದ್ಯಮ ಸಚಿವ ಶೇಖಾವತ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ''ಕೇಂದ್ರದ 'ಪ್ರಸಾದ' ಯೋಜನೆ ಅಡಿಯಲ್ಲಿ ಸವದತ್ತಿ ಎಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿರುವುದರಿಂದ ಈ ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತರಿಗೆ ಆಧುನಿಕ ಸೌಲಭ್ಯಗಳು ದೊರೆಯುವಂತಾಗಲಿದೆ. ಭಕ್ತರಲ್ಲಿ ದೇವಸ್ಥಾನದ ಬಗ್ಗೆ ಸಕಾರಾತ್ಮಕ ಭಾವನೆ ಮೂಡುವ ವಿಶ್ವಾಸ ಇದೆ,'' ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Read More
Next Story