ದಲಿತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವ ಸಭೆ
x
ಮುಖ್ಯಮಂತ್ರಿ ಸಿದ್ದರಾಮಯ್ಯ

ದಲಿತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವ ಸಭೆ

ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇಕಡಾ 24ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ.


ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವರಾಜ್ಯಗಳಲ್ಲೂ ಜಾರಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಅವರು ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ, ಮುನಿಯಪ್ಪ, ಆರ್. ಬಿ. ತಿಮ್ಮಾಪುರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ಜಾರಿಗೆ ತಂದಿದ್ದು, ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುವುದಾಗಿ ತಿಳಿಸಿದರು.

ಬಡ್ತಿಯಲ್ಲಿ ಮೀಸಲಾತಿ, ಪಿಟಿಸಿಎಲ್ ಕಾಯ್ದೆ ಮಾಡಿದ್ದು, ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ಅವರು ತಿಳಿಸಿದರು.

ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2025 ಮತ್ತು 2026ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.

Read More
Next Story