Flower Show 2024 | ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
x
ಫಲಪುಪ್ಪ ಪ್ರದರ್ಶನಕ್ಕೆ ಸಿ.ಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

Flower Show 2024 | ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು


Click the Play button to hear this message in audio format

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಕೂಡ ಭಾಗಿಯಾಗಿದ್ದಾರೆ.

ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ, ಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ತರ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ, ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನು ಅರಿಯಲು ಅಪೂರ್ವ ಅವಕಾಶ ಒದಗಿಸಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ. ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ ಎಂದು ಹೇಳಿದರು.

ಒಟ್ಟು 35 ಲಕ್ಷ ಹೂಗಳ ಬಳಕೆ

ತೋಟಗಾರಿಕಾ ಇಲಾಖೆಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಬೆಳಗ್ಗೆ 9 ಗಂಟೆಯಿಂದ ಆರಂಭವಾಗಿ ಸಂಜೆ 6.30ರವರೆಗೂ ಫ್ಲವರ್ ಶೋ ವೀಕ್ಷಣೆಗೆ ಅವಕಾಶ ಇರಲಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 35 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ. ಆ.8 ರಿಂದ 19 ವರೆಗೆ ಈ ಪ್ರದರ್ಶನ ನಡೆಯಲಿದೆ. ಸಂಸತ್, ಭೀಮ ಸ್ಮಾರಕ, ಅಂಬೇಡ್ಕರ್ ಅವರು ಹುಟ್ಟಿದ ಜಾಗ, ಅವರು ಹುಟ್ಟಿ ಬೆಳೆದು ಬಂದಂತಹ ಹಾದಿ ಹೇಗಿತ್ತು ಎನ್ನುವುದು ಈ ಪ್ರದರ್ಶನದ ಪ್ರಮುಖ ಆಕರ್ಷಣೆಗಳಾಗಿವೆ.‌

ಫ್ಲವರ್​ ಶೋ ಟಿಕೆಟ್​ ದರ ಎಷ್ಟು?

ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸುವವರಿಗೆ ದೊಡ್ಡವರಿಗೆ 80 ರೂ ಟಿಕೆಟ್ ಇದ್ದು, ರಜಾ ದಿನಗಳಲ್ಲಿ 100 ರೂಪಾಯಿ ನಿಗದಿ‌ಮಾಡಲಾಗಿದೆ. ಇನ್ನು ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಅವಕಾಶ ನೀಡಲಾಗಿದೆ. ಈ ಫ್ಲವರ್ ಶೋಗೆ ಈ ಬಾರಿ ಎರಡು ಕೋಟಿ ಖರ್ಚು ಮಾಡಲಾಗಿದೆ.

ಸ್ವದೇಸಿ ಹೂಗಳ ಮಧ್ಯೆ ವಿದೇಶಿ ಹೂಗಳು

ಆಂಥೋರಿಯಂ, ಗುಲಾಬಿ, ಜರ್ಬೆರಾ, ಆರ್ಕಿಡ್‌, ನಂದಿ ಗಿರಿಧಾಮದ ಇಂಪೇಷನ್ಸ್‌ ಹೂಗಳು, ರೆಡ್‌ಹಾಟ್‌ ಪೋಕರ್‌, ಆಲ್‌ಸ್ಟೋಮೇರಿಯನ್‌ ಲಿಲ್ಲಿ, ಪೂಷಿಯಾ, ಅಗಪಾಂಥಸ್‌, ಸೈಕ್ಲೋಮನ್‌, ಕ್ಯಾಲಾಲಿಲ್ಲಿ, ಸುಗಂಧ ರಾಜ, ಕುಂಡಗಳಲ್ಲಿ ಅರಳಿದ ದೇಶ-ವಿದೇಶಗಳ ಹತ್ತಾರು ಬಗೆಯ ಹೂಗಳು, ಬೋಗನ್‌ ವಿಲ್ಲಾ ಗಿಡಗಳು, ಲಿಲ್ಲಿ, ಜರ್ಬೆರಾ ಹೂಗಳು ಕೊಲಂಬಿಯಾ, ನೆದರ್ ಲ್ಯಾಂಡ್ಸ್, ಬೆಲ್ಜಿಯಂ, ಕೀನ್ಯಾ, ಆಸ್ಟ್ರೇಲಿಯಾದಿಂದ ಹೂಗಳು ಲಾಲ್ ಬಾಗ್ ಗೆ ಆಗಮಿಸಿವೆ.

ಅಲ್ಲದೇ ವಿವಿಧ ಬಗೆಯ ಆಕರ್ಷಕ ಬೋನ್ಸಾಯ್, ಇಕೆಬಾನ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಗಳ ಪ್ರದರ್ಶನವೂ ಇಲ್ಲಿರಲಿದ್ದು, ಸ್ವದೇಸಿ ಹೂಗಳ ಮಧ್ಯೆ ವಿದೇಶಿ ಹೂಗಳೂ ಕಂಗೊಳಿಸಲಿವೆ.

Read More
Next Story