
ಡಿಕೆ ಶಿವಕುಮಾರ್
Congress Unrest | ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿಕೆಶಿ
ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ನಾನು ಕಾರ್ಯಕರ್ತರ ಸಭೆ ಮಾಡಲು ಹೋಗಿದ್ದೆ.
ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಅವರು ಸೋಮವಾರ ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ತಡೆಯಲು ಯಾರಿದಂಲೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ವಿಧಾನಸೌಧದಲ್ಲಿ ಅವರು ಪ್ರತಿಕ್ರಿಯೆ ನೀಡಿದರು.
ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ನಾನು ಕಾರ್ಯಕರ್ತರ ಸಭೆ ಮಾಡಲು ಹೋಗಿದ್ದೆ. ಮೊಯ್ಲಿ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಮಾತಾಡಬಾರದು ಅಂತ ಹೇಳಿದ್ದಾರೆ. ನಾನು ಅದಕ್ಕೆ ಬದ್ದವಾಗಿದ್ದೇನೆ ಎಂದು ತಿಳಿಸಿದರು.
ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಾಜಿ ಸಿಎಂ ವೀರಪ್ಪ ಮೊಯ್ಲಿ, "ಡಿಕೆ ಶಿವಕುಮಾರ್ ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ. ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ್ದು, ಅವರು ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರು ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಇದು ತೀರ್ಮಾನ ಆಗಿರುವ ವಿಷಯ. ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಸಾಧ್ಯವಿಲ್ಲ ಎಂಬುವುದು ಶತಸಿದ್ಧ" ಎಂದು ಹೇಳಿಕೆ ನೀಡಿದ್ದರು.