HDK Land Encroachment | ಕುಮಾರಸ್ವಾಮಿ ತೋಟದ ಮನೆಯ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ
x

HDK Land Encroachment | ಕುಮಾರಸ್ವಾಮಿ ತೋಟದ ಮನೆಯ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ

ಕಂದಾಯ ಇಲಾಖೆ ಜಿಲ್ಲಾ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದೊಂದಿಗೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ನಡೆಸಲು ಎರಡು ಜೆಸಿಬಿಗಳು ಸಿದ್ಧವಾಗಿವೆ.


ರಾಮನಗರ ಜಿಲ್ಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕುಟುಂಬದಿಂದ ನಡೆಸಲ್ಪಡುತ್ತಿದೆ ಎನ್ನಲಾದ 14 ಎಕರೆ ಭೂಮಿಯ ಅತಿಕ್ರಮಣವನ್ನು ತೆರವುಗೊಳಿಸಲು ರಾಜ್ಯ ಕಂದಾಯ ಇಲಾಖೆ ತೆರವು ಕಾರ್ಯಾಚರಣೆಗೆ ಮುಂದಾಗಿದೆ.

ಸರ್ಕಾರಿ ಭೂಮಿಯನ್ನು ಅತಿಕ್ರಮಣದಿಂದ ವಾಪಸ್ ಪಡೆಯುವಂತೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಕಂದಾಯ ಇಲಾಖೆ ಜಿಲ್ಲಾ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದೊಂದಿಗೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ನಡೆಸಲು ಎರಡು ಜೆಸಿಬಿಗಳು ಸಿದ್ಧವಾಗಿವೆ.

ಹೆಚ್​ಡಿಕೆ ಕುಟುಂಬದ ವಿರುದ್ಧ ಕೇಳಿಬಂದಿರುವ ಭೂಒತ್ತುವರಿ ಆರೋಪ ಸಂಬಂಧ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್​ಐಟಿ ರಚನೆ ಮಾಡಿದ್ದರು. ಕೇತಗಾನಹಳ್ಳಿಯ ಸರ್ವೆ ನಂ.7, 8, 9, 10, 16, 17, 79ರಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕಂದಾಯ ಇಲಾಖೆ, ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆದಿದೆ. ಇದೀಗ ಸರ್ಕಾರಕ್ಕೆ ಸರ್ವೆ ವರದಿ ಸಲ್ಲಿಸಿ ಒತ್ತುವರಿ ತೆರವು ಮಾಡಲು ಇಲಾಖೆ ಮುಂದಾಗಿದೆ.

ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಕುಟುಂಬದವರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಈ ವಿಚಾರವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿತ್ತು. ಇದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣ ಸಂಬಂಧ ಹೈಕೋರ್ಟಿನಲ್ಲಿ ಸೋಮವಾರ ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ಕೆ ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಎಸ್ಐಟಿ ರಚನೆ ಮಾಡಿದ್ದಾರೆ. ಹಾಗಾದರೆ ಕಂದಾಯ ಇಲಾಖೆ ಅಷ್ಟೊಂದು ಶಕ್ತಿಶಾಲಿಯಾಗಿದೆಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಭೂ ಒತ್ತುವರಿ ತೆರವು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹಾಗಾದರೆ ಉಳಿದ 71 ಎಕರೆ ಭೂಮಿ ಒತ್ತುವರಿಯನ್ನು ತೆರವು ಮಾಡಬೇಕಾಗಿದೆ ಅಲ್ಲವೇ ಎಂದು ವಿಭಾಗಿಯ ಪೀಠ ಸರ್ಕಾರವನ್ನು ಪ್ರಶ್ನಿಸಿತ್ತು.

ಇಷ್ಟೇ ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಬ್ರೈನ್ ಮ್ಯಾಪಿಂಗ್​ಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು. ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಭೂ ಒತ್ತುವರಿ ತೆರವು ಕಾರ್ಯಚರಣೆಗೆ ಮುಂದಾಗಿದೆ.

Read More
Next Story