
ಟಿಪ್ಪರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.
Road Accident | ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ, ಐವರು ಭಕ್ತರು ಬಲಿ
ಮಧುವನಹಳ್ಳಿ ವಡ್ಡರಕಟ್ಟೆ ಕೆರೆ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋಗುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಶನಿವಾರ ಬೆಳಿಗ್ಗೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಬಳಿ ನಡೆದಿದೆ.
ಮಧುವನಹಳ್ಳಿ ವಡ್ಡರಕಟ್ಟೆ ಕೆರೆ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಿಂದ ಕೆಳಗೆ ಬಿದ್ದು, ಕಾರಿನಲ್ಲಿದ್ದ 5 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಐವರು ಮಂಡ್ಯ ಜಿಲ್ಲೆಯವರಾಗಿದ್ದಾರೆ.
ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story