BJP eyeing GBA, local body polls: Gearing up for statewide show of strength
x
ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿದರು. 

ರಾಜ್ಯದಲ್ಲಿ ತುರ್ತು ಪರಿಸ್ಥಿತಿ ವಾತಾವರಣ: ಮೋಹನ್ ದಾಸ್ ಪೈ ವಿರುದ್ಧದ ಕೇಸ್​​ ಖಂಡಿಸಿದ ಬಿ.ಎಸ್. ಯಡಿಯೂರಪ್ಪ

ಲಂಚ ಕೊಡದಿದ್ದರೆ ಕೆಲಸ ಆಗುವುದಿಲ್ಲ ಎಂದು ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿರುವ ಬಿ.ಆರ್. ಪಾಟೀಲ್ ಅವರೇ ಹೇಳಿದ್ದು ಸಿಎಂಗೆ ವಾಸ್ತವ ಸ್ಥಿತಿ ತಿಳಿಸುತ್ತೇನೆ ಎಂದಿದ್ದಾರೆ. ಅವರ ಬಾಯಿ ಮುಚ್ಚಿಸುವ ಬಗ್ಗೆ ನಮಗೆ ಆತಂಕವಿದೆ ಎಂದು ಮಾಜಿ ಸಿಎಂ ಬಿಎಸ್‌ವೈ ತಿಳಿಸಿದ್ದಾರೆ.


ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣವಿದೆ. ಸರ್ಕಾರದ ವಿರುದ್ಧ ಮಾತನಾಡುವವರ ಮೇಲೆ ಭಯ ಹುಟ್ಟಿಸುವ ರೀತಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತೀವ್ರ ಆರೋಪ ಮಾಡಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ (ಜೂನ್ 23) ನಡೆದ ಮಾಧ್ಯಮ ವಿಭಾಗದ ಸಭೆಯಲ್ಲಿ ಮಾತನಾಡಿದ ಅವರು, ಉದ್ಯಮಿ ಮೋಹನ್ ದಾಸ್ ಪೈ ಅವರ ಮೇಲೆ ದಾಖಲಾಗಿರುವ ಎಫ್‌ಐಆರ್‌ ಕುರಿತು ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. "ಲಂಚ ಕೊಡದಿದ್ದರೆ ಕೆಲಸ ಆಗುವುದಿಲ್ಲ ಎಂದು ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿರುವ ಬಿ.ಆರ್. ಪಾಟೀಲ್ ಅವರೇ ಹೇಳಿದ್ದು, ಸಿಎಂಗೆ ವಾಸ್ತವ ಸ್ಥಿತಿ ತಿಳಿಸುತ್ತೇನೆ ಎಂದಿದ್ದಾರೆ. ಅವರ ಬಾಯಿ ಮುಚ್ಚಿಸುವ ಬಗ್ಗೆ ನಮಗೆ ಆತಂಕವಿದೆ" ಎಂದು ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದರು.

ಬಿಎಸ್‌ವೈ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯ ಪಾತ್ರ

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಪ್ರತಿ ಸೋಮವಾರ ನಡೆಯಲಿರುವ ಬಿಜೆಪಿ ಮಾಧ್ಯಮ ವಿಭಾಗದ ಸಭೆಯಲ್ಲಿ ಭಾಗವಹಿಸಿ, ರಾಜ್ಯದ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಸಲಹೆ ನೀಡಿದರು.

ಉದ್ಯಮಿ ಮೋಹನ್‌ ದಾಸ್‌ ಪೈ ವಿರುದ್ದ ದೂರು ದಾಖಲು

ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದೆ. ಮೋಹನ್ ದಾಸ್ ಪೈ ಅವರ ಕುಮ್ಮಕ್ಕಿನಿಂದಲೇ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನ ಪ್ರತಿಯಲ್ಲಿ ಮೋಹನ್ ದಾಸ್ ಪೈ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Read More
Next Story