ಗದಗ: ಸರ್ಕಾರಿ ಬಸ್, ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು
x
ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದೆ.

ಗದಗ: ಸರ್ಕಾರಿ ಬಸ್, ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು


Click the Play button to hear this message in audio format

ಕೆಎಸ್‌ಆರ್‌ ಟಿಸಿ ಹಾಗೂ ಕಾರು ನಡುವೆ ಭೀಕರ ಅಪಘಾuತ ಸಂಭವಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು.

ಮೃತ ಕುಟುಂಬ ಶ್ರಾವಣ ಮಾಸದ ನಿಮಿತ್ಯ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿತ್ತು. ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಘೂ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More
Next Story