ಬೆಳಗಾವಿ ʼಗಾಂಧಿ ಭಾರತʼ | ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ
x
ಗಾಂಧಿ ಪ್ರತಿಮೆ ಉದ್ಘಾಟನೆ.

ಬೆಳಗಾವಿ ʼಗಾಂಧಿ ಭಾರತʼ | ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ

ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿ ಸ್ಥಾಪಿಸಲಾಗಿರುವ ನವೀಕೃತ ಫೋಟೊ ಗ್ಯಾಲರಿಯನ್ನು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಇದೇ ವೇಳೆ ವೀರಸೌಧ (ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜತೆಯಾಗಿ ಗಿಡ ನೆಟ್ಟು ನೀರೆರೆದರು.


1924ರಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ರಾಜ್ಯ ಸರ್ಕಾರ ನಡೆಸುತ್ತಿರುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ಟಿಳಕವಾಡಿಯಲ್ಲಿರುವ ವೀರಸೌಧದಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಅವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ‌ ಅನಾವರಣಗೊಳಿಸಿದರು. ಇದರೊಂದಿಗೆ ‘ಗಾಂಧಿ ಭಾರತ’ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿನ ನವೀಕೃತ ಫೋಟೊ ಗ್ಯಾಲರಿಯನ್ನು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಇದೇ ವೇಳೆ ವೀರಸೌಧ (ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜತೆಯಾಗಿ ಸಸಿ ನೆಟ್ಟು ನೀರೆರೆದರು.

ಈ ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ‌ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ‌‌ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕರಾದ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.

Read More
Next Story