ಎಚ್‌ಡಿಕೆ ಆರೋಗ್ಯದಲ್ಲಿ ದಿಢೀರ್ ಏರುಪೇರು: ಚಿಕಿತ್ಸೆಗಾಗಿ ಚೆನ್ನೈಗೆ ಪ್ರಯಾಣ
x
ಹೆಚ್‌ ಡಿ ಕುಮಾರಸ್ವಾಮಿ

ಎಚ್‌ಡಿಕೆ ಆರೋಗ್ಯದಲ್ಲಿ ದಿಢೀರ್ ಏರುಪೇರು: ಚಿಕಿತ್ಸೆಗಾಗಿ ಚೆನ್ನೈಗೆ ಪ್ರಯಾಣ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಲು ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಲು ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ನಾಲ್ಕು ದಿನಗಳಿಂದ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇತ್ತೀಚೆಗೆ ಕೆಲಸದ ಒತ್ತಡದಿಂದ ದಣಿದಿದ್ದ ಅವರಿಗೆ ಅನಾರೋಗ್ಯ ಕಂಡುಬಂದಿದೆ ಎನ್ನಲಾಗಿದೆ.

ಕಳೆದ ಬಾರಿ ಚೆನ್ನೈ ಅಪೋಲೊ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಪಡೆದುಕೊಂಡಿದ್ದರು. ಹಾಗಾಗಿ ಚೆನ್ನೈಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.

ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ನಾಲ್ಕು ದಿನಗಳಿಂದ ಊಹಾಪೋಹಗಳು ಎದ್ದಿದ್ದವು. ಆದರೆ, ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿದ್ದವು. ಇನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಅವರು ಈ ವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರುವುದಾಗಿ ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಗೆ ಮುನ್ನ ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದುಕೊಂಡು ಸ್ವಲ್ಪ ದಿನ ವಿಶ್ರಾಂತಿ ಪಡೆದು ನಂತರ ರಾಜಕೀಯ ಚಟುವಟಿಕೆಗಳಿಗೆ ಮರಳಿದ್ದರು.

Read More
Next Story