ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆತ್ಮಹತ್ಯೆ
x

ಕರ್ನಾಟಕ ರಾಜ್ಯ ಬಿಜೆಪಿಯ ಮಹಿಳಾ ಜನರಲ್ ಸೆಕ್ರೆಟರಿ ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆತ್ಮಹತ್ಯೆ

ಮಂಜುಳಾ ಸಾವಿಗೆ ಶರಣಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳವಾರ (ಮಾರ್ಚ್​ 11) ಬೆಂಗಳೂರಿನ ಮತ್ತಿಕೆರೆಯ ನಿವಾಸದಲ್ಲೇ ಮಂಜುಳಾ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿರುವ ಮಂಜುಳಾ, ಜೀವನದಲ್ಲಿ ಹೆಸರು ಮಾಡಬಹುದು, ಹಣ ಗಳಿಸಬಹುದು. ಆದರೆ, ನೆಮ್ಮದಿ ಇರಬೇಕು. ನನಗೆ ನೆಮ್ಮದಿಯೇ ಇರಲಿಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಮಂಜುಳಾ ಸಾವಿಗೆ ಶರಣಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದಾರೆ.

ಮಂಜುಳಾ ಹಲವು ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಹುದ್ದೆ ಸಿಕ್ಕಿತ್ತು.ಆದರೆ ಇತ್ತೀಚೆಗೆ ಮಂಜುಳಾ ಅವರು ಗಂಡನನ್ನು ಕಳೆದುಕೊಂಡಿದ್ದಳು. ಬಳಿಕ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಮಂಜುಳಾ ಅವರು ಪಕ್ಷದ ಕಾರ್ಯಚಟುವಟಿಕೆಗಳಿಂದ ಪಾಲ್ಗೊಳ್ಳಲಾಗದೇ ದೂರವಿದ್ದರು. ಗಂಡನ ಸಾವು ನೋವಿನಿಂದ ಹೊರಬಾರಲಾಗದೇ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

Read More
Next Story