SSLC, PUC Exams | ಪರೀಕ್ಷೆಗೆ ಹೋಗಿಬರಲು ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ
x
ಕೆಎಸ್‌ಆರ್‌ಟಿಸಿ

SSLC, PUC Exams | ಪರೀಕ್ಷೆಗೆ ಹೋಗಿಬರಲು ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ

ತಮ್ಮ ನಿವಾಸದಿಂದ ಅವರಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ.


ಮುಂದಿನ ವಾರದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಮಾರ್ಚ್‌ 1ರಿಂದಲೇ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್‌ 20ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ಒಟ್ಟಾರೆ ಮಾರ್ಚ್‌ ತಿಂಗಳಿಡೀ ಒಂದಿಲ್ಲೊಂದು ಪರೀಕ್ಷೆ ನಡೆಯಲಿದ್ದು, ಲಕ್ಷಾಂತರ ಮಕ್ಕಳು ಪರೀಕ್ಷೆಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣಿಸಲಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಸಕಾಲದಲ್ಲಿ ಯಾವ ಆತಂಕವಿಲ್ಲದೆ ತಲುಪುವಂತೆ ನೆರವಾಗಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಪ್ರತಿ ಬಾರಿಯಂತೆ ಈ ಬಾರಿಯೂ ಪರೀಕ್ಷಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ ಮಾಡಿದೆ.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಘೋಷಿಸಿದೆ.

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, KSRTC ತನ್ನ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ಅವರಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 1ರಿಂದ 20ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಮತ್ತು ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ SSLC ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಸ್​​ಎಸ್​​ಎಲ್​​ಸಿ ಪರೀಕ್ಷೆ - 1 ರ ವೇಳಾಪಟ್ಟಿ ಹೀಗಿದೆ.

ಮಾರ್ಚ್ 21 - ಪ್ರಥಮ ಭಾಷೆ (ಕನ್ನಡ, ಸಂಸ್ಕೃತ, ಹಿಂದಿ, ಉರ್ದು, ಇತ್ಯಾದಿ)

ಮಾರ್ಚ್ 24 - ಗಣಿತ

ಮಾರ್ಚ್ 26 - ದ್ವಿತೀಯ ಭಾಷೆ (ಇಂಗ್ಲಿಷ್​​, ಕನ್ನಡ)

ಮಾರ್ಚ್ 29 - ಸಮಾಜ ವಿಜ್ಞಾನ

ಏಪ್ರಿಲ್ 2 - ವಿಜ್ಞಾನ

ಏಪ್ರಿಲ್ 4 - ತೃತೀಯ ಭಾಷೆ

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ

ಮಾರ್ಚ್ 1 - ಕನ್ನಡ, ಅರೇಬಿಕ್

ಮಾರ್ಚ್ 3 - ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಮಾರ್ಚ್ 4 - ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 5 - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾರ್ಚ್ 7 - ಇತಿಹಾಸ, ಭೌತಶಾಸ್ತ್ರ

ಮಾರ್ಚ್ 10 - ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 12 - ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ

ಮಾರ್ಚ್ 13 - ಅರ್ಥಶಾಸ್ತ್ರ

ಮಾರ್ಚ್ 15 - ಇಂಗ್ಲಿಷ್

ಮಾರ್ಚ್ 17 - ಭೂಗೋಳಶಾಸ್ತ್ರ

ಮಾರ್ಚ್ 18 - ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 19 - ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್

ಮಾರ್ಚ್ 20 - ಹಿಂದಿ

ಪರೀಕ್ಷೆ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ ನಡೆಯಲಿದೆ.

Read More
Next Story