ನಿಯಮ ಉಲ್ಲಂಘನೆ, ಡ್ರಗ್ಸ್​ ಮಾರಾಟ: 292 ಫಾರ್ಮಸಿಗಳ ಪರವಾನಗಿ ರದ್ದು
x
ಡ್ರಗ್ಸ್

ನಿಯಮ ಉಲ್ಲಂಘನೆ, ಡ್ರಗ್ಸ್​ ಮಾರಾಟ: 292 ಫಾರ್ಮಸಿಗಳ ಪರವಾನಗಿ ರದ್ದು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ನಿಯಮಾವಳಿ ಉಲ್ಲಂಘನೆ, ಮಾದಕ ದ್ರವ್ಯಗಳ ಅಕ್ರಮ ಮಾರಾಟ ಮತ್ತು ಕೆಲವು ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ 292 ಫಾರ್ಮಸಿಗಳ ಪರವಾನಗಿಯನ್ನು ಹಿಂಪಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Click the Play button to hear this message in audio format

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ನಿಯಮಾವಳಿ ಉಲ್ಲಂಘನೆ, ಮಾದಕ ದ್ರವ್ಯಗಳ ಅಕ್ರಮ ಮಾರಾಟ ಮತ್ತು ಕೆಲವು ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ 292 ಫಾರ್ಮಸಿಗಳ ಪರವಾನಗಿಯನ್ನು ಹಿಂಪಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಬಗ್ಗೆ ಸೋಮವಾರ ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿದ ಅವರು, ಇಲಾಖೆ ಅಧಿಕಾರಿಗಳು ನಡೆಸಿದ ಪರಿಶೀಲನೆಯಲ್ಲಿ ಅಕ್ರಮ ನಡೆಸಿದ್ದ 1,245 ಫಾರ್ಮಸಿಗಳ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಈ ಪೈಕಿ 292 ಸಂಸ್ಥೆಗಳ ಪರವಾನಗಿಯನ್ನು ಹಿಂಪಡೆಯಲಾಗಿದೆ. ರಾಜ್ಯದಲ್ಲಿ 37,130 ಖಾಸಗಿ ಔಷಧಾಲಯಗಳಿವೆ. ನಾವು 20 ಸಂಸ್ಥೆಗಳ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಸಿದ್ದೇವೆ ಮತ್ತು 6 ಕಂಪನಿಗಳಿಗೆ ಶಿಕ್ಷೆಯನ್ನು ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದರು.

2022-23 ಮತ್ತು 2023-24ರ ಅವಧಿಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಮಾರಾಟಕ್ಕಾಗಿ 89 ಔಷಧಾಲಯಗಳ ವಿರುದ್ಧ ಇಲಾಖೆ ಅಧಿಕಾರಿಗಳು ತಪಾಸಣೆಯ ಸಂದರ್ಭದಲ್ಲಿ ಕ್ರಮ ಕೈಗೊಂಡಿದ್ದಾರೆ. ಮಾದಕ ದ್ರವ್ಯಗಳ ಅಕ್ರಮ ಮಾರಾಟಕ್ಕಾಗಿ 699 ಔಷಧಾಲಯಗಳಲ್ಲಿ ತಪಾಸಣೆ ನಡೆಸಲಾಯಿತು ಮತ್ತು 89 ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ 23 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.

‘ಔಷಧಿಗಳಿಗೆ ನಿಧಿ’

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಕುರಿತು ವಿರೋಧ ಪಕ್ಷದ ಸದಸ್ಯರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಅಗತ್ಯ ಔಷಧಗಳನ್ನು ಖರೀದಿಸಲು ಆಸ್ಪತ್ರೆಗಳಲ್ಲಿ ಹಣವಿದೆ. ಔಷಧಗಳ ಕೊರತೆಯಾಗದಂತೆ 2 ವರ್ಷಗಳಿಗೊಮ್ಮೆ ಕೆಎಸ್‌ಎಂಎಸ್‌ಸಿಎಲ್ ಮೂಲಕ ಟೆಂಡರ್ ಕರೆಯಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು.

Read More
Next Story