ಲಾರಿ – ಟ್ರಕ್ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು
x

ಸಿಬಾರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಲಾರಿ – ಟ್ರಕ್ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು


ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್​ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್​​ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More
Next Story