Midday Meal : ಇನ್ನು ಮುಂದೆ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಚಿಕ್ಕಿ ಸಿಗುವುದಿಲ್ಲ !
x
Chikki

Midday Meal : ಇನ್ನು ಮುಂದೆ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಚಿಕ್ಕಿ ಸಿಗುವುದಿಲ್ಲ !

Midday Meal : ಮಧ್ಯಾಹ್ನದ ಬಿಸಿಯೂಟದ ಜತೆಗೆ ನೀಡುವ ಮೊಟ್ಟೆಯನ್ನು ತಿನ್ನದ ಮಕ್ಕಳಿಗೆ ನೀಡುತ್ತಿದ್ದ ಚಿಕ್ಕಿ ವಿತರಣೆ ಸ್ಥಗಿತಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.


ಸರ್ಕಾರಿ ಶಾಲೆಯ ಅಭಿವೃದ್ಧಿ ಕುರಿತು ಮಾತನಾಡುವ ರಾಜ್ಯ ಸರ್ಕಾರಕ್ಕೆ ಮಕ್ಕಳಿಗೆ ನೀಡುವ ಆಹಾರವನ್ನೂ ಸರಿಯಾಗಿ ಪೂರೈಕೆ ಮಾಡಲಾಗದ ಸ್ಥಿತಿ ಬಂದಿದೆ. ಕಳಪೆ ಆಹಾರ ಪೂರೈಕೆ ಮಾಡುವ ಜತೆಗೆ ಅದೇ ನೆಪವಾಗಿಟ್ಟುಕೊಂಡು (Midday Meal ) ನೀಡುವ ತಿಂಡಿಯನ್ನೇ ನಿಲ್ಲಿಸುವ ನಿರ್ಧಾರ ಕೈಗೊಂಡಿದೆ. ಅದರಲ್ಲೂ ಮಕ್ಕಳಿಗೆ ಇಷ್ಟವಾಗುವ ಚಿಕ್ಕಿ ವಿತರಣೆಯನ್ನು ನಿಲ್ಲಿಸಲು ಆದೇಶಿಸಿದೆ.

ಮಧ್ಯಾಹ್ನದ ಬಿಸಿಯೂಟದ ಜತೆಗೆ ನೀಡುವ ಮೊಟ್ಟೆಯನ್ನು ತಿನ್ನದ ಮಕ್ಕಳಿಗೆ ನೀಡುತ್ತಿದ್ದ ಚಿಕ್ಕಿ ವಿತರಣೆ ಸ್ಥಗಿತಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಕಲಬುರಗಿ ವಿಭಾಗದ ಕೆಲ ಶಾಲೆಗಳಲ್ಲಿ ವಿತರಿಸಿದ ಚಿಕ್ಕಿಗಳು ಕಳಪೆ ಮಟ್ಟದ್ದಿದ್ದವು. ಮಕ್ಕಳು ತಿನ್ನುವುದಕ್ಕೆ ಯೋಗ್ಯವಾಗಿರಲಿಲ್ಲ. ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಕೊಬ್ಬು ಹಾಗೂ ಸಕ್ಕರೆ ಅಂಶ ಹೆಚ್ಚಿನ ಮಟ್ಟದಲ್ಲಿದೆ ಎನ್ನುವ ಕುರಿತು ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರು ಬರೆದ ಪತ್ರ ಆಧರಿಸಿ ಇಲಾಖೆ ಕ್ರಮ ಕೈಗೊಂಡಿದೆ.

ರಾಜ್ಯದ ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆಗೆ ವಾರದ ಆರು ದಿನ ಮೊಟ್ಟೆ ವಿತರಿಸಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುತ್ತಿತ್ತು. ಆದರೆ ಕಳಪೆ ಚಿಕ್ಕಿ ವಿತರಣೆ ಮಾಡುವ ಮೂಲಕ ತನ್ನನ್ನೇ ತಾನು ಬಹಿರಂಗ ಮಾಡಿಕೊಂಡಿದೆ.

ಚಿಕ್ಕಿಯ ಗಾತ್ರ ವಿಭಿನ್ನ

ಬಹುತೇಕ ಶಾಲೆಗಳಲ್ಲಿ ಚಿಕ್ಕಿಯ ಗಾತ್ರ ಒಂದೇ ತೆರನಾಗಿ ಇಲ್ಲದಿರುವುದು, ಅವಧಿ ಮೀರಿದ ಸಂಗ್ರಹ ಮತ್ತಿತರ ಕಾರಣಗಳಿಂದಲೂ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ, ಚಿಕ್ಕಿ ವಿತರಣೆ ಮಾಡಬಾರದು ಎಂದು ಇಲಾಖೆ ಸೂಚಿಸಿದೆ. ಒಂದು ಮೊಟ್ಟೆ ಅಥವಾ ಬಾಳೆಹಣ್ಣಿಗೆ ₹6 ನಿಗದಿ ಮಾಡಲಾಗಿದೆ. 2024–25ನೇ ಸಾಲಿನಲ್ಲಿ 51.96 ಲಕ್ಷ ಮಕ್ಕಳು ಪ್ರಯೋಜನ ಪಡೆಯುತ್ತಿದ್ದಾರೆ.

Read More
Next Story