Karnataka HighCourt | ಫ್ಲೆಕ್ಸ್‌ ಅಳವಡಿಕೆ ವಿವಾದ: ಅರ್ಜಿದಾರರಿಗೆ ಶಾಸಕರಿಂದ ಬೆದರಿಕೆ ಆರೋಪ
x
ಕರ್ನಾಟಕ ಹೈಕೋರ್ಟ್‌

Karnataka HighCourt | ಫ್ಲೆಕ್ಸ್‌ ಅಳವಡಿಕೆ ವಿವಾದ: ಅರ್ಜಿದಾರರಿಗೆ ಶಾಸಕರಿಂದ ಬೆದರಿಕೆ ಆರೋಪ

ಬಿಬಿಎಂಪಿ ಪರ ವಕೀಲರು ವಾದ ಮಂಡಿಸಿ, ಈ ವಿಚಾರದಲ್ಲಿ ಪಾಲಿಕೆ ಸುತ್ತೋಲೆಯೊಂದನ್ನು ಹೊರಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

 &

ʼಬಿಬಿಎಂಪಿ ಮಾಲೀಕತ್ವದ ಕಟ್ಟಡಗಳಲ್ಲಿ ಚುನಾಯಿತ ಪ್ರತಿನಿಧಿಗಳ ಭಾವಚಿತ್ರ ಪ್ರಕಟಿಸಿರುವುದನ್ನು ಆಕ್ಷೇಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿರುವ ಅರ್ಜಿದಾರರಿಗೆ ಇಬ್ಬರು ಶಾಸಕರು ನಿರಂತರ ಬೆದರಿಕೆ ಹಾಕುತ್ತಿದ್ದಾರೆ' ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಬಿಬಿಎಂಪಿ ಹಾಗೂ ಇತರ ಸರ್ಕಾರಿ ಕಟ್ಟಡಗಳಲ್ಲಿ, ಉದ್ಯಾನಗಳಲ್ಲಿ ವಿಜಯನಗರ ಶಾಸಕ ಎಂ. ಕೃಷ್ಣಪ್ಪ, ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ ಅವರ ಫೋಟೋಗಳನ್ನು ಬಿಬಿಎಂಪಿ ಹಣದಲ್ಲಿ ಹಾಕಿರುವುದನ್ನು ಆಕ್ಷೇಪಿಸಿ ಸ್ಥಳೀಯ ನಿವಾಸಿ ಎಚ್.ಎಂ. ಆರ್ತೀಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಶಾಸಕರು ತಮ್ಮ ಕಕ್ಷಿದಾರರಿಗೆ ಬೆದರಿಕೆ ಹಾಕುತ್ತಿರುವ ವಿಚಾರವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಬಿಬಿಎಂಪಿ ಪರ ವಕೀಲರು ವಾದ ಮಂಡಿಸಿ, ಈ ವಿಚಾರದಲ್ಲಿ ಪಾಲಿಕೆ ಸುತ್ತೋಲೆಯೊಂದನ್ನು ಹೊರಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಆಗ ನ್ಯಾಯಪೀಠ, ಫೋಟೋ ಅಳವಡಿಸುವುದು ಬಯಲು ಪ್ರದೇಶಗಳ ವಿರೂಪ ತಡೆ ಕಾಯ್ದೆಯ ವ್ಯಾಪ್ತಿಗೆ ಬರುತ್ತದೆಯೇ ಎಂದು ಪ್ರಶ್ನಿಸಿತು. ಅದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಅದು ಗೊತ್ತಿಲ್ಲ. ಆದರೆ, ಬಿಬಿಎಂಪಿ ಸುತ್ತೋಲೆಯಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 'ಸರ್ಕಾರಿ ಕಟ್ಟಡಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ನಾಯಕರ ಫೋಟೋಗಳನ್ನು ಹಾಕುವುದು, 'ಕರ್ನಾಟಕ ಸಾರ್ವಜನಿಕ ಸ್ಥಳ ವಿರೂಪ ತಡೆ ಕಾಯ್ದೆ' ವ್ಯಾಪ್ತಿಗೆ ಬರಲಿದೆಯೇ ಎಂಬ ಬಗ್ಗೆ ವಿವರಣೆ ನೀಡಿ ಪ್ರಮಾಣಪತ್ರ ಸಲ್ಲಿಸಿ' ಎಂದು ಬಿಬಿಎಂಪಿಗೆ ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿತು.

Read More
Next Story