Karnataka Budget 2025| ರಾಜ್ಯ ಬಜೆಟ್ ಮಂಡನೆ ಮಾ.7ಕ್ಕೆ: ಸಿದ್ದರಾಮಯ್ಯ ಘೋಷಣೆ
x
ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Budget 2025| ರಾಜ್ಯ ಬಜೆಟ್ ಮಂಡನೆ ಮಾ.7ಕ್ಕೆ: ಸಿದ್ದರಾಮಯ್ಯ ಘೋಷಣೆ

Karnataka Budget 2025 | ಮಾರ್ಚ್ 4, 5, 6ರಂದು ಚರ್ಚೆ ನಡೆಯಲಿದೆ. ಮಾರ್ಚ್‌ 7ರ ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


2025-26ನೇ ಸಾಲಿನ ರಾಜ್ಯ ಬಜೆಟ್‌ ಮಾರ್ಚ್ 7ಕ್ಕೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬಜೆಟ್​ ಮಂಡನೆ ಬಗ್ಗೆ ಹಲವು ಸುತ್ತಿನ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧದಲ್ಲಿ ಅಧಿಕೃತ ಮಾಹಿತಿ ನೀಡಿದರು. ಮಾರ್ಚ್​​ 3ರಿಂದ ವಿಧಾನಸಭೆಯಲ್ಲಿ ಬಜೆಟ್​ ಅಧಿವೇಶನ ಆರಂಭವಾಗಲಿದೆ. ಹೊಸ ವರ್ಷದ ಮೊದಲ ಅಧಿವೇಶನ ಇದಾಗಿದ್ದು, ಮಾರ್ಚ್‌ 3ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮಾರ್ಚ್ 4, 5, 6ರಂದು ಚರ್ಚೆ ನಡೆಯಲಿದೆ. ಮಾರ್ಚ್‌ 7ರ ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸದ್ಯ ಮಂಡಿನೋವಿನಿಂದ ಬಳಲುತ್ತಿರುವ ಸಿ.ಎಂ ಸಿದ್ದರಾಮಯ್ಯ ಅವರು, ವ್ಹೀಲ್​ ಚೇರ್‌ನಲ್ಲೇ ವಿಧಾನಸೌಧಕ್ಕೆ ಆಗಮಿಸಿ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಿದರು.

ಮೆಟ್ರೋ ಟಿಕೆಟ್ ದರ ಏರಿಕೆ, ಬೆಲೆ ಏರಿಕೆ ಬಗ್ಗೆ ಮಾತನಾಡಿರುವ ಸಿ.ಎಂ, ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಮಾಡಬೇಕು. ರಾಜ್ಯ ಸರ್ಕಾರದ ಕಡೆಯಿಂದ ಬೆಲೆ ಏರಿಕೆಗೆ ಏನು ಮಾಡಬೇಕೋ ಅದು ಮಾಡ್ತೀವಿ. ಕೇಂದ್ರ ಸರ್ಕಾರ ಕೂಡ ಬೆಲೆ ಏರಿಕೆ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದರು.

Read More
Next Story