Hampi Gangrape | ಅತ್ಯಾಚಾರ ಪ್ರಕರಣದಿಂದ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಭಾರಿ ಇಳಿಕೆ
x

ಹಂಪಿ

Hampi Gangrape | ಅತ್ಯಾಚಾರ ಪ್ರಕರಣದಿಂದ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಭಾರಿ ಇಳಿಕೆ

ವಿದೇಶಗಳ ಪ್ರಯಾಣಿಕರು ಮಾತ್ರವಲ್ಲ, ಇತರ ರಾಜ್ಯಗಳ ಪ್ರವಾಸಿಗರು ಕೂಡ ಹಂಪಿಗೆ ನಿಗದಿಪಡಿಸಿದ್ದ ಪ್ರವಾಸವನ್ನು ರದ್ದು ಮಾಡುತ್ತಿದ್ದಾರೆ ಮತ್ತು ಮುಂದೂಡುತ್ತಿದ್ದಾರೆ ಎಂದು ತಿಳಿದುಬಂದಿದೆ.


ಕೊಪ್ಪಳ ಜಿಲ್ಲೆಯ ಸಾಣಾಪುರ ಗ್ರಾಮದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ನಡೆದ ಅತ್ಯಾಚಾರ ಪ್ರಕರಣದ ಬಳಿಕ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿರುವುದಾಗಿ ವರದಿಯಾಗಿದೆ.

ಹೋಮ್​ಸ್ಟೇಗಳು ಮತ್ತು ಹೋಟೆಲ್‌ಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸಿದ್ದ ಅನೇಕ ಪ್ರವಾಸಿಗರು ಅವುಗಳನ್ನು ರದ್ದುಗೊಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಹಂಪಿ ಮತ್ತು ಅದರ ಸುತ್ತಮುತ್ತಲಿನ 25 ಕ್ಕೂ ಹೆಚ್ಚು ಹೋಂಸ್ಟೇಗಳಲ್ಲಿ ಬುಕಿಂಗ್ ಕ್ಯಾನ್ಸಲ್ ಮಾಡಲಾಗಿರುವುದು ತಿಳಿದುಬಂದಿದೆ.

ವಿದೇಶಗಳ ಪ್ರಯಾಣಿಕರು ಮಾತ್ರವಲ್ಲ, ಇತರ ರಾಜ್ಯಗಳ ಪ್ರವಾಸಿಗರು ಕೂಡ ಹಂಪಿಗೆ ನಿಗದಿಪಡಿಸಿದ್ದ ಪ್ರವಾಸವನ್ನು ರದ್ದುಗೊಳಿಸುತ್ತಿದ್ದಾರೆ ಅಥವಾ ಮುಂದೂಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಂಪಿ ಮತ್ತು ಜಿಲ್ಲೆಯ ಇತರ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವವರಿಗೆ ಸುರಕ್ಷತೆ ಒದಗಿಸಲು ಪೊಲೀಸ್ ಇಲಾಖೆ ಸಿದ್ಧವಾಗಿದೆ ಮತ್ತು ಶೀಘ್ರದಲ್ಲೇ ಹೋಮ್​ ಸ್ಟೇ ಮಾಲೀಕರಿಗೆ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿಎಲ್ ತಿಳಿಸಿದ್ದಾರೆ.

ಏನಿದು ಘಟನೆ

ಮಾರ್ಚ್ 6ರಂದು ರಾತ್ರಿ 11 ಗಂಟೆ ಸುಮಾರಿಗೆ ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯ ಸಾಣಾಪುರ ಕೆರೆಯ ಬಳಿ ಪುರುಷ ಪ್ರವಾಸಿಗರನ್ನು ಕಾಲುವೆಗೆ ನೂಕಿ, ಇಸ್ರೇಲ್ ಮಹಿಳೆ ಹಾಗೂ ಸ್ಥಳೀಯ ಹೋಮ್ ಸ್ಟೇ ನಿರ್ವಾಹಕಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದರು.

ಐವರು ಪ್ರವಾಸಿಗರು ಸಣಾಪುರ ಕೆರೆಯ ಬಳಿ ನಕ್ಷತ್ರಗಳನ್ನು ನೋಡುತ್ತಾ ಗಿಟಾರ್ ನುಡಿಸುತ್ತಾ ಆನಂದಿಸುತ್ತಿದ್ದರು. ಈ ವೇಳೆ ಬೈಕ್​​ನಲ್ಲಿ ಬಂದಿದ್ದ ಮೂವರು ವ್ಯಕ್ತಿಗಳು ಪೆಟ್ರೋಲ್​​ಗೆ 100 ರೂಪಾಯಿ ನೀಡುವಂತೆ ಒತ್ತಾಯಿಸಿದ್ದರು. ಹಣ ನೀಡಲು ನಿರಾಕರಿಸಿದಾಗ ದುಷ್ಕರ್ಮಿಗಳು ಪುರುಷ ಪ್ರವಾಸಿಗರ ಮೇಲೆ ಹಲ್ಲೆ ಮಾಡಿ ಕಾಲುವೆಗೆ ದೂಡಿ, ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

ಕಾಲುವಿಗೆ ದೂಡಿದ್ದ ಮೂವರಲ್ಲಿ ಇಬ್ಬರು ಕಷ್ಟಪಟ್ಟು ಈಜಿ ದಡ ಸೇರಿದ್ದರು. ಒಡಿಶಾದ ಬಿಬಾಸ್ ಎಂಬುವರು ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Read More
Next Story