
ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Hampi Gangrape | ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರಿಬ್ಬರ ಮೇಲೆ ಗ್ಯಾಂಗ್ರೇಪ್: ಇಬ್ಬರ ಬಂಧನ
ಮಲ್ಲೇಶ್(22) ಮತ್ತು ಚೇತನ್ಸಾಯಿ ಸಿಳ್ಳೇಕ್ಯಾತರ್(21) ಬಂಧಿತರು. ಬಂಧಿತರಿಬ್ಬರು ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಳು.
ಗಂಗಾವತಿ ತಾಲೂಕಿನ ಸಾಣಾಪುರ ಕರೆಯ ಬಳಿಕ ನಡೆದ ವಿದೇಶಿ ಮಹಿಳೆ ಸೇರಿ ಇಬ್ಬರು ಮಹಿಳೆಯರ ಮೇಲೆ ಸಮೂಹಿಕ ಅತ್ಯಾಚಾರ ಹಾಗೂ ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಲ್ಲೇಶ್(22) ಮತ್ತು ಚೇತನ್ಸಾಯಿ ಸಿಳ್ಳೇಕ್ಯಾತರ್(21) ಬಂಧಿತರು. ಬಂಧಿತರಿಬ್ಬರು ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಳು. ಪರಾರಿಯಾದ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಏನಿದು ಘಟನೆ
ಮಾರ್ಚ್ 6ರಂದು ರಾತ್ರಿ 11 ಗಂಟೆ ಸುಮಾರಿಗೆ ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯ ಬಳಿ ಪುರುಷ ಪ್ರವಾಸಿಗರನ್ನು ಕಾಲುವೆಗೆ ನೂಕಿ, ಓರ್ವ ಇಸ್ರೇಲ್ ಮಹಿಳೆ ಹಾಗೂ ಸ್ಥಳೀಯ ಹೋಮ್ ಸ್ಟೇ ನಿರ್ವಾಹಕಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದರು.
ಐವರು ಪ್ರವಾಸಿಗರು ಸಣಾಪುರ ಕೆರೆಯ ಬಳಿ ನಕ್ಷತ್ರಗಳನ್ನು ನೋಡುತ್ತಾ ಗಿಟಾರ್ ನುಡಿಸುತ್ತಾ ಆನಂದಿಸುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಮೂವರು ವ್ಯಕ್ತಿಗಳು ಪೆಟ್ರೋಲೆ 100 ರೂಪಾಯಿ ನೀಡುವಂತೆ ಹೋಂ ಸ್ಟೇ ನಿರ್ವಾಹಕಿ ಒತ್ತಾಯಿಸಿದ್ದರು. ಹಣ ನೀಡಲು ನಿರಾಕರಿಸಿದಾಗ ದುಷ್ಕರ್ಮಿಗಳು ಪುರುಷ ಪ್ರವಾಸಿಗರ ಮೇಲೆ ಹಲ್ಲೆ ಮಾಡಿ ಕಾಲುವೆಗೆ ದೂಡಿ, ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.
ಕಾಲುವಿಗೆ ದೂಡಿದ್ದ ಮೂವರಲ್ಲಿ ಇಬ್ಬರು ಕಷ್ಟಪಟ್ಟು ಈಜಿ ದಡ ಸೇರಿದ್ದರು. ಒಡಿಶಾದ ಬಿಬಾಸ್ ಎಂಬಾತ ಪತ್ತೆ ಆಗಿರಲಿಲ್ಲ. ಶನಿವಾರ ಒಡಿಶಾ ಮೂಲದ ವ್ಯಕ್ತಿ ಶವ ಪತ್ತೆಯಾಗಿತ್ತು.