UN Officials Visit | ಗ್ಯಾರಂಟಿ ಯೋಜನೆ : ವಿಶ್ವಸಂಸ್ಥೆ ಅಧಿಕಾರಿಯ ಮೆಚ್ಚುಗೆ
x
ವಿಧಾನಸೌಧ

UN Officials Visit | ಗ್ಯಾರಂಟಿ ಯೋಜನೆ : ವಿಶ್ವಸಂಸ್ಥೆ ಅಧಿಕಾರಿಯ ಮೆಚ್ಚುಗೆ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, 'ಒಂದು ರಾಜ್ಯ, ಹಲವು ಜಗತ್ತು' ಕುರಿತಾದ ಪುಸ್ತಕವನ್ನು ಫಿಲೆಮನ್‌ ಅವರಿಗೆ ಉಡುಗೊರೆಯಾಗಿ ನೀಡಿದರು.


ಮಹಿಳಾ ಸಬಲೀಕರಣಕ್ಕೆ ರಾಜ್ಯ ಸರ್ಕಾರವು ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಮತ್ತು ಗೃಹಜ್ಯೋತಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವಲ್ಲಿ ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, 'ಒಂದು ರಾಜ್ಯ, ಹಲವು ಜಗತ್ತು' ಪುಸ್ತಕವನ್ನು ಫಿಲೆಮನ್‌ ಅವರಿಗೆ ಉಡುಗೊರೆಯಾಗಿ ನೀಡಿದರು.

ಈ ವೇಳೆ ಮಹಿಳಾ ಸಬಲೀಕರಣದಲ್ಲಿ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಶಕ್ತಿ ಮತ್ತು ಗೃಹಜ್ಯೋತಿ ಯೋಜನೆಗಳು ಹೇಗೆ ನೆರವಾಗುತ್ತಿವೆ ಎಂಬುದನ್ನು ಸಿಎಸ್‌ ಶಾಲಿನಿ ರಜನೀಶ್ ಅವರು ವಿವರಿಸಿದರು. ಫಿಲೆಮನ್ ಅವರು ರಾಜ್ಯದ ನವೀಕರಿಸಬಹುದಾದ ಮೂಲದ ಇಂಧನ ಉತ್ಪಾದನಾ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ಧಿ, ಕೃತಕ ಬುದ್ಧಿಮತ್ತೆ ಅಭಿವೃದ್ಧಿ ಕಾರ್ಯಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು ಎಂದು ತಿಳಿಸಿದೆ.

Read More
Next Story