
ಆಪರೇಷನ್ ಕೆಲ್ಲರ್.
OPERATION KELLER : ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳಿಂದ ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರ ಹತ್ಯೆ
ಹತ್ಯೆಗೊಳಗಾದ ಭಯೋತ್ಪಾದಕರ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಪ್ರದೇಶದಲ್ಲಿ ಇನ್ನೂ ಹಲವು ಭಯೋತ್ಪಾದಕರು ಅವಿತಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಹೇಳಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಲಷ್ಕರ್-ಎ-ತೈಬಾ (LeT) ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರಿರುವ ಬಗ್ಗೆ ತಿಳಿದು ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ಆರಂಭಿಸಿದ್ದರಿಂದ ಎನ್‌ಕೌಂಟರ್ ಪ್ರಾರಂಭವಾಯಿತು. ಭದ್ರತಾ ಪಡೆಗಳ ಪ್ರತಿದಾಳಿ ನಡೆಸಿ ಮೂವರು ಭಯೋತ್ಪಾದಕರು ಹೊಡೆದುರುಳಿಸಿದ್ದಾರೆ. ಈ ಕಾರ್ಯಾಚರಣೆಯನ್ನು ‘ಆಪರೇಷನ್ ಕೆಲ್ಲರ್’ ಎಂದು ಕರೆಯಲಾಗಿದೆ.
ಹತ್ಯೆಗೊಳಗಾದ ಭಯೋತ್ಪಾದಕರ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಪ್ರದೇಶದಲ್ಲಿ ಇನ್ನೂ ಹಲವು ಭಯೋತ್ಪಾದಕರು ಅವಿತಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಹೇಳಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ.
ನಿರಂತರ ಶೋಧ
ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ದಕ್ಷಿಣ ಕಾಶ್ಮೀರ ಮತ್ತು ಕಿಷ್ಟ್ವಾರ್ ಅರಣ್ಯ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ದಾಳಿಯಲ್ಲಿ ಭಾಗಿಯಾದ ಅಡಿಲ್ ಹುಸೇನ್ ಠೋಕರ್, ಅಲಿ ಭಾಯ್ (ತಲ್ಹಾ), ಮತ್ತು ಹಾಶಿಮ್ ಮೂಸಾ ಎಂಬ ಮೂವರು ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು 20 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಅವರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿದ್ದು, ಪುಲ್ವಾಮ ಜಿಲ್ಲೆಯ ವಿವಿಧೆಡೆ ‘ಭಯೋತ್ಪಾದನೆ ಮುಕ್ತ ಕಾಶ್ಮೀರ’ ಎಂಬ ಘೋಷಣೆಯ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.