
ತಮಿಳುನಾಡಿನ ವಿರುಧುನಗರದ ಪಟಾಕಿ ತಯಾರಿಕೆ ಘಟಕದಲ್ಲಿ ಸ್ಫೋಟದಿಂದ ಉರುಳಿ ಬಿದ್ದ ಗೋಡೆಗಳು
ಪಟಾಕಿ ಘಟಕದಲ್ಲಿ ಸ್ಫೋಟ: 8 ಮಂದಿ ಸಾವು
ವಿರುಧುನಗರ (ತಮಿಳುನಾಡು), ಫೆ 17: ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 8 ಜನರು ಮೃತಪಟ್ಟು, 3 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವೆಂಬಕೊಟ್ಟೈ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ ಎಂದು ತಿಳಿಸಿದ್ದಾರೆ. ಸ್ಫೋಟದ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ.
Next Story