ರಾಜ್ಯಕ್ಕೆ ನಿಮ್ಮ ಕೊಡುಗೆ ತಿಳಿಸಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲು
x

ರಾಜ್ಯಕ್ಕೆ ನಿಮ್ಮ ಕೊಡುಗೆ ತಿಳಿಸಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲು

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಮೋದಿ ಏನು ಮಾಡಿದ್ದಾರೆ? ಬರ ಪರಿಹಾರ ಇದುವರೆಗೂ ಕೊಟ್ಟಿಲ್ಲ ಏಕೆ ಎಂಬುದನ್ನು ನಾಡಿನ ಜನತೆಗೆ ತಿಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಏ.14ಕ್ಕೆ ಲೋಕಸಭಾ ಚುನಾವಣಾ ಪ್ರಚಾರ ಮಾಡಲು ರಾಜ್ಯಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ತಮ್ಮ ಕೊಡುಗೆ ಏನು ಎಂಬುದನ್ನು ತಿಳಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಪ್ರಧಾನಿ ಮೋದಿ ಬರುತ್ತಿರುವ ಬಗ್ಗೆ ನಮ್ಮ ಅಭ್ಯಂತರವೇನಿಲ್ಲ. ಆದರೆ, ಅವರು ನಿರುದ್ಯೋಗ ನಿವಾರಣೆಗೆ ಏನು ಮಾಡಿದ್ದಾರೆ? ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಏನು ಮಾಡಿದ್ದಾರೆ? ಬರ ಪರಿಹಾರ ಇದುವರೆಗೂ ಕೊಟ್ಟಿಲ್ಲ ಏಕೆ ಎಂಬುದನ್ನೆಲ್ಲಾ ನಾಡಿನ ಜನತೆಗೆ ತಿಳಿಸಬೇಕು ಎಂದಿದ್ದಾರೆ.

ಸಂವಿಧಾನ ಬದಲಾಯಿಸುವಿಕೆ ಸಾಧ್ಯವಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹಾಗಿದ್ದರೆ, ಸಂಸದ ಅನಂತಕುಮಾರ ಹೆಗಡೆ ಸಂವಿಧಾನ ಬದಲಿಸುವುದಾಗಿ ಹೇಳಿದರೂ ಕ್ರಮ ಏಕೆ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಮೈಸೂರು ಭಾಗದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಬಗ್ಗೆ ಅಸಮಾಧಾನ ಹೊಂದಿರುವ ಬಿಜೆಪಿ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ.

ನಾಳೆ (ಏ.14) ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದು, ಅದಕ್ಕೂ ಮುನ್ನ ಚಾಮರಾಜನಗರದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಮನೆಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಚರ್ಚಿಸಿದ್ದಾರೆ. ಕಳೆದ 6-7ವರ್ಷಗಳಿಂದ ಶ್ರೀನಿವಾಸ್‌ ಪ್ರಸಾದ್‌ ಮತ್ತು ಸಿದ್ದರಾಮಯ್ಯ ಅವರು ಪರಸ್ಪರ ಅಂತರ ಕಾಯ್ದುಕೊಂಡಿದ್ದರು. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಹಳೆ ದೋಸ್ತಿಗಳ ಮರು ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಈಗಾಗಲೇ, ಮೋದಿ ಸಮಾವೇಶಕ್ಕೆ ಆಹ್ವಾನ ನೀಡದೇ ಇರುವುದರಿಂದ ತಾನು ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಶ್ರೀನಿವಾಸ್‌ ಪ್ರಸಾದ್‌ ಹೇಳಿದ್ದಾರೆ.

Read More
Next Story