
ಕಾವೇರಿ ಕೊಳ್ಳದ ಜಲಬಿಕ್ಕಟ್ಟಿಗೆ ಮೇಕೆದಾಟು ಪರಿಹಾರವೇ?
'ರಾಜ್ಯದಲ್ಲಿ ಜೂನ್‌ನಿಂದ ಆಗಷ್ಟ್ ವರೆಗೆ ಕಾವೇರಿ ನದಿ ಪ್ರದೇಶದಲ್ಲಿ ವಾಡಿಕೆಗಿಂತ ಶೇ 44 ರಷ್ಟು ಮಳೆ ಕಡಿಮೆಯಾಗಿದೆ. ಇಲ್ಲಿನ ಜಲಾಶಯಗಳಲ್ಲಿರುವ ನೀರು ಕುಡಿಯಲೂ ಸಾಕಾಗುವುದಿಲ್ಲ ಎಂಬುದನ್ನು ಅಂಕಿ-ಅಂಶಗಳು ಸಾರುತ್ತವೆ.
ರಾಜ್ಯದಲ್ಲಿ ಈ ಬಾರಿ ಮಳೆಗಾಲದಲ್ಲೂ ಬರಗಾಲದ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡು ರಾಜ್ಯ ಸರ್ಕಾರ ಕಾವೇರಿ ನೀರು ಹರಿಬಿಡಬೇಕು ಎಂದು ಹೇಳುತ್ತದೆ. ಮತ್ತೊಂದೆಡೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯು ತಮಿಳುನಾಡಿಗೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ. ಇದರಿಂದ ರಾಜ್ಯದ ರೈತರಿಗೆ ಸಂಕಷ್ಟ ಎದುರಾಗಿದೆ.
'ರಾಜ್ಯದಲ್ಲಿ ಜೂನ್‌ನಿಂದ ಆಗಷ್ಟ್ ವರೆಗೆ ಕಾವೇರಿ ನದಿ ಪ್ರದೇಶದಲ್ಲಿ ವಾಡಿಕೆಗಿಂತ ಶೇ 44 ರಷ್ಟು ಮಳೆ ಕಡಿಮೆಯಾಗಿದೆ. ಇಲ್ಲಿನ ಜಲಾಶಯಗಳಲ್ಲಿರುವ ನೀರು ಕುಡಿಯಲೂ ಸಾಕಾಗುವುದಿಲ್ಲ ಎಂಬುದನ್ನು ಅಂಕಿ-ಅಂಶಗಳು ಸಾರುತ್ತವೆ. ಇಷ್ಟಾಗಿಯೂ ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯ ತಮಿಳುನಾಡಿಗೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ. ಇದನ್ನೇ ಸುಪ್ರೀಂ ಕೋರ್ಟ್ ಪುನರುಚ್ಛರಿಸಿದೆ. ಇದರಿಂದ ರಾಜ್ಯದ ಜನರಿಗೆ ಕುಡಿಯುವ ನೀರಿನ ಹಕ್ಕನ್ನು ಕಿತ್ತುಕೊಂಡಂತಾಗಿದೆ. ರೈತರ ಹಿತವನ್ನೂ ಕಡೆಗಣಿಸಿದಂತಾಗಿದೆ.
ಈ ಸಂದರ್ಭದಲ್ಲಿ ಕನ್ನಡಿಗರ ಹಿತ ರಕ್ಷಣೆಗೆ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾದರೆ ಎಲ್ಲಾ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ಕನ್ನಡ ಸಂಘಟನೆಗಳು ಮತ್ತು ನಾಯಕರು ಪಕ್ಷಬೇಧ, ಭಿನ್ನಾಭಿಪ್ರಾಯಗಳನ್ನು ಮರೆತು ಸರ್ಕಾರದ ಜೊತೆ ದೃಢವಾಗಿ ನಿಲ್ಲಬೇಕಿದೆ.
ನ್ಯಾಯಾಲಯದ ಆದೇಶ ಪಾಲಿಸಲು ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿದೆ. ಇದು ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ, ವಿಶೇಷವಾಗಿ ಮಂಡ್ಯದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಕಾವೇರಿ ನೀರಿನ ವಿವಾದ ಮತ್ತೆ ರಾಜಕೀಯ ಕೆಸರೆರಚಾಟಕ್ಕೆ ಸಾಕ್ಷಿಯಾಯಿತು.
ಆದರೆ, ಕಾವೇರಿ ನದಿಗೆ ಮೇಕೆದಾಟು ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಹು ಉದ್ದೇಶಿತ ಜಲಾಶಯ ನಿರ್ಮಾಣದ ಯೋಜನೆ ಈವೇಳೆಗೆ ಜಾರಿಯಾಗಿದ್ದರೆ, ಇಂತಹದ್ದೊಂದು ಸಂಕಷ್ಟದ ಸಂದರ್ಭವನ್ನು ರಾಜ್ಯ ಎದುರಿಸಬೇಕಿರಲಿಲ್ಲ ಎಂಬ ಮಾತುಗಳೂ ಕೇಳಿಬರುತ್ತಿವೆ.
ಮೇಕೆದಾಟು ಯೋಜನೆಯ ಹಿನ್ನೆಲೆ
ಮೇಕೆದಾಟು ಯೋಜನೆಯನ್ನು 75 ವರ್ಷಗಳ ಹಿಂದೆಯೇ ರೂಪಿಸಲಾಗಿತ್ತು. 1948 ರಲ್ಲಿ ಆಗಿನ ಕಾಂಗ್ರೆಸ್ ಸರ್ಕಾರ ಮೇಕೆದಾಟು ಎಂಬಲ್ಲಿ ಕಾವೇರಿ ನದಿಯ ಮೇಲೆ ವಿವಿಧೋದ್ದೇಶ ಸಮತೋಲನ ಜಲಾಶಯವನ್ನು ನಿರ್ಮಿಸುವ ಕಲ್ಪನೆಯನ್ನು ಮೊದಲು ಪ್ರಸ್ತಾಪಿಸಿತು. 1956ರಲ್ಲಿ ರಾಜ್ಯಗಳನ್ನು ಭಾಷಾವಾರು ಪ್ರಾಂತ್ಯಗಳಾಗಿ ಮರು ವಿಂಗಡಿಸಿದಾಗ ವಿವಾದ ಪ್ರಾರಂಭವಾಯಿತು ಮತ್ತು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ವಿರೋಧಿಸಿತು. 1996-97ರಲ್ಲಿ ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯನ್ನು ಮತ್ತೊಮ್ಮೆ ಮರುಪರಿಶೀಲಿಸಿತು.
ಹೊಗೇನಕಲ್ ಕುಡಿಯುವ ನೀರಿನ ಯೋಜನೆ
ತಮಿಳುನಾಡಿನ ಮಹತ್ವಾಕಾಂಕ್ಷೆಯ ಹೊಗೇನಕಲ್ ಸಂಯೋಜಿತ ನೀರು ಸರಬರಾಜು ಯೋಜನೆ (HCWSS) ಧರ್ಮಪುರಿ ಮತ್ತು ಕೃಷ್ಣಗಿರಿ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸುವುದಿಲ್ಲ. ಜೆ ಎಚ್ ಪಟೇಲ್ ನೇತೃತ್ವದ ಅಂದಿನ ಜನತಾ ದಳ (ಜೆಡಿ) ಸರ್ಕಾರ ತಮಿಳುನಾಡು ಸರ್ಕಾರ ಯೋಜನೆಯನ್ನು ವಿರೋಧಿಸಲು ನಿರ್ಧರಿಸಿತು.
2013 ರಲ್ಲಿ ಅಧಿಕಾರಕ್ಕೆ ಬಂದ ನಂತರ, ಕಾಂಗ್ರೆಸ್ ಸರ್ಕಾರವು ಮೇಕೆದಾಟು ಯೋಜನೆಯನ್ನು ಜಾರಿಗೆ ತರಲು ಕ್ರಮವನ್ನು ಕೈಗೊಂಡಿತು ಮತ್ತು ಮೇಕೆದಾಟು ಯೋಜನೆಯ ಪರಿಷ್ಕೃತ ಆವೃತ್ತಿಯನ್ನು ಕೇಂದ್ರದ ಅನುಮೋದನೆಗೆ ಕಳಿಸಿತು.
ಅದು ಕರ್ನಾಟಕಕ್ಕೆ 67 ಟಿಎಂಸಿ ಅಡಿ ನೀರನ್ನು ಸಮತೋಲನ ಜಲಾಶಯದಲ್ಲಿ ಸಂಗ್ರಹಿಸಲು ಅನುಕೂಲವಾಗುತ್ತದೆ. ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತದೆ.
ಮೇಕೆದಾಟು ಯೋಜನೆಯ ಉದ್ದೇಶ
ಮೇಕೆದಾಟು ವಿವಿಧೋದ್ದೇಶ ಜಲಾಶಯದಲ್ಲಿ ನೀರು ಸಂಗ್ರಹಿಸಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ರಾಮನಗರ ತಾಲೂಕಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವುದು ಯೋಜನೆಯ ಉದ್ದೇಶ. 9500 ಕೋಟಿ ವೆಚ್ಚದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಂಪುಟ ಅನುಮೋದನೆ ನೀಡಲಾಗಿತ್ತು. ಒಂಟಿಗುಂಡ್ಲು ಪ್ರದೇಶದಲ್ಲಿ (ಮುಗ್ಗೂರು ವಾಚ್ ಟವರ್ ಬೆಟ್ಟಗಳು ಮತ್ತು ಹನೂರು ಅರಣ್ಯ ಪ್ರದೇಶದ ನಡುವೆ) ಜಲಾಶಯ ನಿರ್ಮಿಸಿ, ಜೊತೆಗೆ 440 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.