ನ್ಯಾ.ಖಾನ್ವಿಲ್ಕರ್ ಲೋಕಪಾಲ್ ಅಧ್ಯಕ್ಷರಾಗಿ ಪ್ರಮಾಣವಚನ
ನವದೆಹಲಿ,ಮಾ.10- ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾ. ಅಜಯ್ ಮಾಣಿಕ್ ರಾವ್ ಖಾನ್ವಿಲ್ಕರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಲೋಕಪಾಲದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು. ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಯವರು ಪ್ರಮಾಣವಚನ ಬೋಧಿಸಿದರು.
ನ್ಯಾ.ಖಾನ್ವಿಲ್ಕರ್(66) ಮೇ 13, 2016 ರಿಂದ ಜುಲೈ 29, 2022 ರವರೆಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.
ಮೇ 27, 2022 ರಂದು ಪಿನಾಕಿ ಚಂದ್ರ ಘೋಶ್ ಅವರ ನಿವೃತ್ತಿ ನಂತರ ಲೋಕಪಾಲ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಸುಮಾರು ಎರಡು ವರ್ಷಗಳ ನಂತರ ಖಾನ್ವಿಲ್ಕರ್ ಅವರನ್ನು ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
Next Story