ಗುಜರಾತ್: ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಸಂಸದ
x
ಕಾಂಗ್ರೆಸ್ ಗುಜರಾತ್ ರಾಜ್ಯಸಭಾ ಸದಸ್ಯ ಮಾಜಿ ಕೇಂದ್ರ ಸಚಿವ ನರನ್ ರಥ್ವಾ ತಮ್ಮ ಪುತ್ರನೊಂದಿಗೆ ಬಿಜೆಪಿಗೆ ಸೇರಿದರು.

ಗುಜರಾತ್: ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಸಂಸದ

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಗುಜರಾತ್ ರಾಜ್ಯಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ ನರನ್ ರಥ್ವಾ ಅವರು ತಮ್ಮ ಪುತ್ರನೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.


Click the Play button to hear this message in audio format

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಹೊಡೆತ ಬಿದ್ದಿದೆ. ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಮತ್ತು ಮಾಜಿ ಕೇಂದ್ರ ಸಚಿವ ನರನ್ ರಥ್ವಾ ಮತ್ತು ಅವರ ಮಗ ಹೆಚ್ಚಿನ ಸಂಖ್ಯೆಯ ಬೆಂಬಲಿಗರೊಂದಿಗೆ ಮಂಗಳವಾರ ಬಿಜೆಪಿಗೆ ಸೇರಿದ್ದಾರೆ.

ಗುಜರಾತ್‌ನ ಛೋಟಾ ಉದೇಪುರದ ಬುಡಕಟ್ಟು ನಾಯಕ ರಾಥ್ವಾ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಅವರು 1989, 1991, 1996, 1998 ಮತ್ತು 2004 ರಲ್ಲಿ ಐದು ಬಾರಿ ಲೋಕಸಭೆಗೆ ಚುನಾಯಿತರಾಗಿದ್ದರು.

ರಾಥ್ವಾ ಅವರ ಪುತ್ರ ಸಂಗ್ರಾಮ್‌ಸಿನ್ಹ್ ಅವರು 2022 ರ ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ)-ಮೀಸಲು ಛೋಟಾ ಉದೇಪುರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದು. ಇಂದು ತಮ್ಮ ತಂದೆಯೊಂದಿಗೆ ಬಿಜೆಪಿಗೆ ಸೇರಿದ್ದಾರೆ.

2004 ರಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದಲ್ಲಿ ರೈಲ್ವೇ ಖಾತೆಯ ರಾಜ್ಯ ಸಚಿವರಾಗಿದ್ದ ರಾಥ್ವಾ ಅವರು 2009 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ರಾಮಸಿಂಹ ರಥ್ವಾ ವಿರುದ್ಧ ಸೋತಿದ್ದರು.

ಗುಜರಾತ್ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರು ಪಕ್ಷದ ರಾಜ್ಯ ಪ್ರಧಾನ ಕಚೇರಿ 'ಕಮಲಂ'ನಲ್ಲಿ ಕೇಸರಿ ಸ್ಕಾರ್ಫ್ ಮತ್ತು ಕ್ಯಾಪ್ಗಳನ್ನು ನೀಡುವ ಮೂಲಕ ರಥ್ವಾ ಮತ್ತು ಇತರರನ್ನು ಪಕ್ಷಕ್ಕೆ ಸೇರಿಸಿಕೊಂಡರು.


Read More
Next Story