ಲೋಕಸಭೆ ಚುನಾವಣೆ: ಕಾಂಗ್ರೆಸ್-ಎಸ್‌ಪಿ ಮೈತ್ರಿ ಅಂತಿಮ
x
ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ

ಲೋಕಸಭೆ ಚುನಾವಣೆ: ಕಾಂಗ್ರೆಸ್-ಎಸ್‌ಪಿ ಮೈತ್ರಿ ಅಂತಿಮ


ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯನ್ನು ಫೆಬ್ರವರಿ 21 ರಂದು ಅಂತಿಮಗೊಳಿಸಿವೆ.

ಸೀಟು ಹಂಚಿಕೆ ಸೂತ್ರದ ಪ್ರಕಾರ, ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 17 ರಲ್ಲಿ ಮತ್ತು ಮಧ್ಯಪ್ರದೇಶದಲ್ಲಿ 28 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಎಸ್‌ಪಿ ರಾಜ್ಯ ಮುಖ್ಯಸ್ಥ ನರೇಶ್ ಉತ್ತಮ್ ಪಟೇಲ್, ಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಚೌಧರಿ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮತ್ತು ಯುಪಿ ಎಐಸಿಸಿ ಉಸ್ತುವಾರಿ ಅವಿನಾಶ್ ಪಾಂಡೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸ್ಥಾನ ಹಂಚಿಕೆಯನ್ನು ಪ್ರಕಟಿಸಿದರು

ಯುಪಿ-ಎಸ್‌ಪಿಗೆ 63 ಸ್ಥಾನ: ಎಸ್ಪಿ ಉತ್ತರ ಪ್ರದೇಶದ 63 ಸ್ಥಾನಗಳಲ್ಲಿ ಮತ್ತು 29 ಲೋಕಸಭೆ ಸ್ಥಾನಗಳಿರುವ ಮಧ್ಯಪ್ರದೇಶದಲ್ಲಿ ಖಜುರಾಹೊ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ. ಉಳಿದ ಸ್ಥಾನಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ. ಯುಪಿಯಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿರುವ 17 ಸ್ಥಾನಗಳ ಪೈಕಿ ರಾಯ್‌ ಬರೇಲಿ, ಅಮೇಥಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಾಣಸಿ ಸೇರಿವೆ.

ಅಖಿಲೇಶ್ ರಿಂದ ಅಭ್ಯರ್ಥಿ ನಿರ್ಧಾರ: ಉತ್ತರ ಪ್ರದೇಶದ 17 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದ್ದು, ಉಳಿದ 63 ಸ್ಥಾನಗಳ ಅಭ್ಯರ್ಥಿಗಳನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ನಿರ್ಧರಿಸಲಿದ್ದಾರೆ ಎಂದು ಎಸ್‌ಪಿ ರಾಜ್ಯಾಧ್ಯಕ್ಷ ಪಟೇಲ್ ಹೇಳಿದ್ದಾರೆ. ರಾಯ್‌ ಬರೇಲಿ, ಅಮೇಥಿ ಮತ್ತು ವಾರಾಣಸಿಯಲ್ಲದೆ, ಕಾನ್ಪುರ ನಗರ , ಫತೇಪುರ್ ಸಿಕ್ರಿ, ಬಸ್ಗಾಂವ್, ಸಹರಾನ್ಪುರ್, ಪ್ರಯಾಗ್ರಾಜ್, ಮಹಾರಾಜ್ಗಂಜ್, ಅಮ್ರೋಹಾ, ಝಾನ್ಸಿ, ಬುಲಂದ್ಶಹರ್, ಗಾಜಿಯಾಬಾದ್, ಮಥುರಾ, ಸೀತಾಪುರ್, ಬಾರಾಬಂಕಿ ಮತ್ತು ಡಿಯೋರಿಯಾ ಕಾಂಗ್ರೆಸ್ ಸ್ಪರ್ಧಿಸಲಿರುವ ಇತರ ಸ್ಥಾನಗಳು.

ಸೋನಿಯಾ ಗಾಂಧಿ ಪ್ರಸ್ತುತ ರಾಯ್‌ ಬರೇಲಿ ಸಂಸದೆ ಹಾಗೂ ರಾಹುಲ್ ಗಾಂಧಿ ಅವರು ಅಮೇಠಿಯಲ್ಲಿ ಸೋತಿದ್ದರು.

Read More
Next Story