
Sonia Gandhi: ಆರೋಗ್ಯದಲ್ಲಿ ಏರುಪೇರು; ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
Sonia Gandhi : ಕಳೆದ ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಅವರು ಸಾರ್ವಜನಿಕಗಾಗಿ ಕಾಣಿಸಿಕೊಂಡಿದ್ದರು. ಫೆ. 10ರಂದು ಸೋನಿಯಾ ಗಾಂಧಿ ಅವರು ಜನಸಂಖ್ಯಾ ಗಣತಿಯನ್ನು ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.
ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ (Sonia Gandhi) ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ʼʼಸೋನಿಯಾ ಗಾಂಧಿ ಅವರನ್ನು ಗುರುವಾರ (ಫೆ. 20) ಬೆಳಗ್ಗೆ ಸರ್ ಗಂಗಾ ರಾಮ್ (Sir Ganga Ram Hospital) ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ, ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
"ಹೊಟ್ಟೆ ನೋವಿಗಾಗಿ ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಬೆಳಗ್ಗೆ ಅವರನ್ನು ಡಿಸ್‌ಚಾರ್ಜ್ ಮಾಡುವ ಎಲ್ಲ ಸಾಧ್ಯತೆಗಳಿವೆʼʼ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ನಿರ್ವಹಣಾ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸ್ವರೂಪ್ ಹೇಳಿದ್ದಾರೆ. ಸೋನಿಯಾ ಗಾಂಧಿಗೆ ಗ್ಯಾಸ್ಟ್ರೋಎಂಟರಾಲಜಿ ತಜ್ಞ ಡಾ.ಸಮಿರನ್ ನಂದಿ ಚಿಕಿತ್ಸೆ ನೀಡಿದ್ದಾರೆ. ಸೋನಿಯಾ ಗಾಂಧಿ ಕಳೆದ ಡಿಸೆಂಬರ್‌ನಲ್ಲಿ 78ನೇ ವರ್ಷಕ್ಕೆ ಕಾಲಿಟ್ಟಿದ್ದರು.
ಕಳೆದ ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಅವರು ಸಾರ್ವಜನಿಕಗಾಗಿ ಕಾಣಿಸಿಕೊಂಡಿದ್ದರು. ಫೆ. 10ರಂದು ಸೋನಿಯಾ ಗಾಂಧಿ ಅವರು ಜನಸಂಖ್ಯಾ ಗಣತಿಯನ್ನು ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.
ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿರುದ್ಧ ಸೋನಿಯಾ ಗಾಂಧಿ ನೀಡಿದ್ದ ಹೇಳಿಕೆ ದೇಶಾದ್ಯಂತ ವಿವಾದ ಹುಟ್ಟು ಹಾಕಿತ್ತು. ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಸೋನಿಯಾ ಗಾಂಧಿ ಕರೆದಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು.