
ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯಲ್ಲಿ ಶನಿವಾರ (ಫೆಬ್ರವರಿ 24) ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಬಿದ್ದಿದೆ
ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ: 15 ಮಂದಿ ಸಾವು
ಲಕ್ನೋ, ಫೆ.24 - ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿಯೊಂದು ಕೆರೆಗೆ ಉರುಳಿ ಏಳು ಮಕ್ಕಳು ಸೇರಿದಂತೆ 15 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಪಟಿಯಾಲಿ-ದರಿಯಾವ್‌ಗಂಜ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ವಾಹನದಲ್ಲಿದ್ದವರು ಗಂಗಾ ನದಿಯಲ್ಲಿ ಸ್ನಾನ ಮಾಡಲು ಹೋಗುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುಮಾರು 20 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story