Union Budget 2025: ವೈದ್ಯಕೀಯ ಕಾಲೇಜುಗಳಲ್ಲಿ 10,000 ಹೆಚ್ಚುವರಿ ದಾಖಲಾತಿ
Union Budget 2025: ನ್ನೂ 37 ಔಷಧಿಗಳ ಮೇಲೆ ಮೂಲ ಕಸ್ಟಮ್ ಸುಂಕಕ್ಕೆ ವಿನಾಯಿತಿ ನೀಡಲು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ. ಕ್ಯಾನ್ಸರ್, ಅಪರೂಪದ ಕಾಯಿಲೆ ಸೇರಿ 36 ಔಷಧಿಗಳನ್ನು ಮೂಲ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ಕೊಡಲಾಗಿದೆ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಕೇಂದ್ರ ಬಜೆಟ್‌ನಲ್ಲಿ ಹಲವಾರು ಘೋಷಣೆಗಳನ್ನು ಮಾಡಲಾಗಿದೆ. ಅವುಗಳಲ್ಲಿ ಪ್ರಮುಖವಾಗಿ ಮುಂದಿನ 5 ವರ್ಷಗಳಲ್ಲಿ ಹೆಚ್ಚುವರಿ 10,000 ವೈದ್ಯಕೀಯ ಸೀಟುಗಳನ್ನು ಸೇರಿಸಲಾಗಿದೆ. ಆ ಮೂಲಕ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 75,000ಕ್ಕೆ ಏರಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.
ಕೌಶಲ ಮತ್ತು ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಹೂಡಿಕೆ ಮಾಡುವುದಕ್ಕಾಗಿ 'ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್'ಗೆ ಪೂರಕವಾಗಿರುವ ಕೌಶಲ ಹೊಂದಿರುವವರನ್ನು ಸಜ್ಜುಗೊಳಿಸಲು ಜಾಗತಿಕ ಪರಿಣತಿ ಮತ್ತು ಸಹಭಾಗಿತ್ವದೊಂದಿಗೆ 5 ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಜತೆಗೆ 500 ಕೋಟಿ ರೂ, ವೆಚ್ಚದಲ್ಲಿ ಕೃತಕ ಬುದ್ದಿಮತ್ತೆ ಕೇಂದ್ರ ಸ್ಥಾಪಿಸುವುದಾಗಿಯೂ ವಿತ್ರ ಸಚಿವೆ ಘೋಷಿಸಿದ್ದಾರೆ.
ಈ ಎಲ್ಲ ವಸ್ತುಗಳ ಬೆಲೆ ಇಳಿಕೆ
ಇನ್ನೂ 37 ಔಷಧಿಗಳ ಮೇಲೆ ಮೂಲ ಕಸ್ಟಮ್ ಸುಂಕಕ್ಕೆ ವಿನಾಯಿತಿ ನೀಡಲು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ. ಕ್ಯಾನ್ಸರ್, ಅಪರೂಪದ ಕಾಯಿಲೆ ಸೇರಿ 36 ಔಷಧಿಗಳನ್ನು ಮೂಲ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ಕೊಡಲಾಗಿದೆ. ಕೋಬಾಲ್ಟ್ ಉತ್ಪನ್ನ, ಎಲ್ಇಡಿ, ಸತು, ಲಿಥಿಯಂ-ಐಯಾನ್ ಬ್ಯಾಟರಿ ಸ್ಕ್ರ್ಯಾಪ್ ಮತ್ತು 12 ನಿರ್ಣಾಯಕ ಖನಿಜಗಳನ್ನು ಮೂಲ ಕಸ್ಟಮ್ಸ್ ಸುಂಕದಿಂದ ಸಂಪೂರ್ಣ ವಿನಾಯಿತಿ ಕೊಡಲಾಗಿದೆ. ಈ ಮೂಲಕ ಇವಿ ವಾಹನಗಳು ಹಾಗೂ ಬ್ಯಾಟರಿ ಚಾಲಿತ ಸಾರಿಗೆ ಕ್ಷೇತ್ರಕ್ಕೆ ಉತ್ತೇನಜ ನೀಡಲು ಬಜೆಟ್‌ನಲ್ಲಿ ಮುಂದಾಗಲಾಗಿದೆ.
ಹಡಗುಗಳನ್ನು ತಯಾರಿಸಲು ಬೇಕಾಗಿರುವ ಕಚ್ಚಾ ವಸ್ತುಗಳ ಮೇಲೆ ಮೂಲ ಅಬಕಾರಿ ಸುಂಕ ವಿನಾಯಿತಿ ಇನ್ನೂ 10 ವರ್ಷಗಳವರೆಗೆ ಮುಂದುವರಿಸಲಾಗಿದೆ. ಇದರಿಂದ ಮತ್ಸ್ಯೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕರಕುಶಲ ರಫ್ತನ್ನು ಮತ್ತಷ್ಟು ಉತ್ತೇಜಿಸುವ ಯೋಜನೆಯ ಘೋಷನೆ ಮಾಡಲಾಗಿದ್ದು ಮೇಕ್ ಇನ್ ಇಂಡಿಯಾಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.