
ದೆಹಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ದೇವೇಂದ್ರ ಯಾದವ್
ಏಪ್ರಿಲ್ 30- ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರಾಗಿ ಛತ್ತೀಸ್‌ಗಢ ಶಾಸಕ ದೇವೇಂದ್ರ ಯಾದವ್ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ.
ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ (ಡಿಪಿಸಿಸಿ) ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಡಿಪಿಸಿಸಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಅವರೊಂದಿಗಿನ ಭಿನ್ನಮತ, ಈಶಾನ್ಯ ಹಾಗೂ ವಾಯವ್ಯ ದೆಹಲಿ ಲೋಕಸಭೆ ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಯನ್ನು ಪ್ರಶ್ನಿಸಿ, ರಾಜೀನಾಮೆ ನೀಡಿದ್ದರು.
ಯಾದವ್(51) ಅವರು ವಾಯವ್ಯ ದೆಹಲಿ ಲೋಕಸಭೆ ಕ್ಷೇತ್ರದ ಭಾಗವಾಗಿರುವ ಬದ್ಲಿಯಿಂದ ದೆಹಲಿ ವಿಧಾನಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದಾರೆ. ಪಂಜಾಬ್‌ನ ಎಐಸಿಸಿ ಉಸ್ತುವಾರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ)ಗೆ ಕಾಯಂ ಆಹ್ವಾನಿತ.
Next Story