ಕೆಸಿಆರ್ ಅವರಿಗೆ 48 ಗಂಟೆ ಕಾಲ ನಿರ್ಬಂಧ
ನವದೆಹಲಿ: ಕಾಂಗ್ರೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಭಾರತ್ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ ಅವರಿಗೆ ಛೀಮಾರಿ ಹಾಕಿರುವ ಚುನಾವಣೆ ಆಯೋಗ, 48 ಗಂಟೆ ಕಾಲ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದೆ.
ಏಪ್ರಿಲ್ 5 ರಂದು ಸಿರ್ಸಿಲ್ಲಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಅವರ ಹೇಳಿಕೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ. ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಅವರು ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂದು ಆಯೋಗ ಹೇಳಿದೆ. ಚುನಾವಣೆ ಆಯೋಗ ನೀಡಿದ ಶೋಕಾಸ್ ನೋಟಿಸ್‌ಗೆ ನೀಡಿದ ಉತ್ತರದಲ್ಲಿ ರಾವ್ ಅವರು ತಮ್ಮ ಮಾತುಗಳನ್ನು ತಿರುಚಲಾಗಿದೆ. ಸ್ಥಳೀಯ ಚುನಾವಣಾಧಿಕಾರಿಗಳಿಗೆ ತೆಲುಗು ಉಪಭಾಷೆಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಿದ್ದರು. ರಾವ್ ಅವರು ಹಿಂದಿನ ಚುನಾವಣೆಯಲ್ಲೂ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದರು ಎಂದು ಆದೇಶ ನೆನಪಿಸಿದೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿಯವರ 48 ಗಂಟೆ ನಿಷೇಧ ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿದೆ. ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನಂತರ ರಾವ್ ಅವರು ಲೋಕಸಭೆ ಚುನಾವಣೆಯಲ್ಲಿ 48 ಗಂಟೆ ಕಾಲ ಪ್ರಚಾರದಿಂದ ನಿರ್ಬಂಧಿಲ್ಪ ಟ್ಟ ಎರಡನೇ ರಾಜಕಾರಣಿ.
ಬಿಆರ್‌ಎಸ್ ಮುಖ್ಯಸ್ಥರ ವಿರುದ್ಧ ಕಾಂಗ್ರೆಸ್ ಮುಖಂಡರೊಬ್ಬರು ಆಯೋಗಕ್ಕೆ ದೂರು ನೀಡಿದ್ದರು.