18ನೇ ಲೋಕಸಭೆ ಮೊದಲ ಅಧಿವೇಶನ: ಪ್ರಧಾನಿ ಮೋದಿ ಸೇರಿದಂತೆ ಸಚಿವರು, ಸಂಸದರಿಂದ ಪ್ರಮಾಣ ವಚನ
18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ( ಜೂನ್ 23) ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿಮಂಡಲದ ಸದಸ್ಯರು, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಅನೇಕ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಹೊಸದಿಲ್ಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ( ಜೂನ್ 23) ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿಮಂಡಲದ ಸದಸ್ಯರು, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಅನೇಕ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷದ ಸಂಸದರು ಸಂವಿಧಾನದ ಪ್ರತಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತೋರಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇದೇ ರೀತಿ ಶುಭಾಶಯ ಕೋರಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೃಣಮೂಲ ನಾಯಕ ಕಲ್ಯಾಣ್ ಬ್ಯಾನರ್ಜಿ, ಮತ್ತು ಸಮಾಜವಾದಿ ಪಕ್ಷದ ನಾಯಕರಾದ ಅಖಿಲೇಶ್ ಯಾದವ್ ಮತ್ತು ಅವಧೇಶ್ ಪ್ರಸಾದ್ ಮೊದಲ ಸಾಲಿನಲ್ಲಿ ವಿರೋಧ ಪಕ್ಷದ ಬೆಂಚ್‌ನಲ್ಲಿ ಕುಳಿತಿದ್ದರು.
ರಾಷ್ಟ್ರಪತಿ ಭಾಷಣ
ಜೂನ್ 26 ರಂದು ಲೋಕಸಭೆಯ ಸ್ಪೀಕರ್ ಆಯ್ಕೆ ಮತ್ತು ಜೂನ್ 27 ರಂದು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ, ರಾಷ್ಟ್ರಪತಿ ದ್ರೌಪದಿ ದ್ರೌಪತಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ. ಸೋಮವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಮಹತಾಬ್ ಅವರಿಗೆ ರಾಷ್ಟ್ರಪತಿ ಅವರು ಪ್ರಮಾಣ ವಚನ ಬೋಧಿಸಿದರು. ಮಹತಾಬ್ ಆನಂತರ ಸಂಸತ್ ಭವನಕ್ಕೆ ಆಗಮಿಸಿ, ಲೋಕಸಭೆ ಅಧಿವೇಶನವನ್ನು ಆರಂಭಿಸಿದರು.
ಜೂನ್ 26ಕ್ಕೆ ಸ್ಪೀಕರ್ ಚುನಾವಣೆ: ನೂತನ ಸಂಸದರಿಗೆ ಪ್ರಮಾಣವಚನ/ದೃಢೀಕರಣವನ್ನು ಬೋಧಿಸಲು ಮಹತಾಬ್ ಅವರಿಗೆ ಸಹಾಯ ಮಾಡಲು ಕೋಡಿಕುನ್ನಿಲ್ ಸುರೇಶ್ (ಕಾಂಗ್ರೆಸ್), ಟಿ.ಆರ್. ಬಾಲು (ಡಿಎಂಕೆ), ರಾಧಾ ಮೋಹನ್ ಸಿಂಗ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ (ಇಬ್ಬರೂ ಬಿಜೆಪಿ) ಮತ್ತು ಸುದೀಪ್ ಬಂಡೋಪಾಧ್ಯಾಯ (ಟಿಎಂಸಿ) ಅವರನ್ನು ರಾಷ್ಟ್ರಪತಿ ನೇಮಿಸಿದ್ದಾರೆ.