22 ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ, ಮಾನ್ಸೂನ್ ದುರಂತಕ್ಕೆ ಪರಿಹಾರ ನೀಡಲಿಲ್ಲ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರ ಅವಧಿಯಲ್ಲಿ 22 ಉದ್ಜಯಮಿಗಳ 16 ಲಕ್ಷ ಕೋಟಿ ರೂ.ಸಾಲವನ್ನು ಮನ್ನಾ ಮಾಡಿದ್ದಾರೆ ಆದರೆ ಕಳೆದ ವರ್ಷ ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಮುಂಗಾರು ದುರಂತಕ್ಕೆ 9,000 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ (ಮೇ 26) ವಾಗ್ಧಾಳಿ ನಡೆಸಿದರು.
ಗುಡ್ಡಗಾಡು ಪ್ರದೇಶಕ್ಕೆ ಸಹಾಯ ಮಾಡುವ ಬದಲು, ರಾಜ್ಯದ ಚುನಾಯಿತ ಸರ್ಕಾರವನ್ನು ಕೆಡವಲು ಶಾಸಕರನ್ನು ಕದಿಯುವ ಪ್ರಯತ್ನ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ವಿರುದ್ಧ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.
ಶಿಮ್ಲಾ (ಎಸ್‌ಸಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಸುಲ್ತಾನ್‌ಪುರಿ ಅವರನ್ನು ಬೆಂಬಲಿಸಿ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ನಹಾನ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ʻʻನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದಾಗಲೆಲ್ಲಾ ಅದಾನಿ ಒಡೆತನದ ಕಂಪನಿಗಳ ಷೇರುಗಳ ಬೆಲೆ ಏರುತ್ತದೆʼʼ ಎಂದು ಹೇಳಿದರು.
ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಕೃಷಿ ಸಾಲ ಮನ್ನಾ ಮಾಡುವುದಾಗಿ ರಾಹುಲ್ ಭಾಷಣದಲ್ಲಿ ಭರವಸೆ ನೀಡಿದರು.
ಬಡ ಕುಟುಂಬಗಳು ಬಡತನ ರೇಖೆಗಿಂತ ಮೇಲಕ್ಕೆ ಬರುವವರೆಗೆ ಪ್ರತಿ ವರ್ಷ 1 ಲಕ್ಷ ರೂ. ದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಲು ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷರು ಭರವಸೆ ನೀಡಿದರು.