ಸಂದೇಶಖಾಲಿ: ಎನ್‌ಸಿಡಬ್ಲ್ಯು ಅಧ್ಯಕ್ಷೆ ವಿರುದ್ಧ ಇಸಿಗೆ ಟಿಎಂಸಿ ದೂರು
x

ಸಂದೇಶಖಾಲಿ: ಎನ್‌ಸಿಡಬ್ಲ್ಯು ಅಧ್ಯಕ್ಷೆ ವಿರುದ್ಧ ಇಸಿಗೆ ಟಿಎಂಸಿ ದೂರು


ಕೋಲ್ಕತ್ತಾ, ಮೇ 10: ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಆರೋಪದ ಮೇಲೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ವಿರುದ್ಧ ಚುನಾವಣೆ ಆಯೋಗಕ್ಕೆ ಔಪಚಾರಿಕ ದೂರು ಸಲ್ಲಿಸುವುದಾಗಿ ತೃಣಮೂಲ ಕಾಂಗ್ರೆಸ್ ಶುಕ್ರವಾರ ಹೇಳಿದೆ.

ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯದ ಆರೋಪದ ಮೇಲೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಮಹಿಳಾ ಆಯೋಗವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶಿಫಾರಸು ಮಾಡಿತ್ತು. ʻರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿರುದ್ಧ ಟಿಎಂಸಿ ಚುನಾವಣೆ ಆಯೋಗದ ಮೊರೆ ಹೋಗಲಿದೆ. ಟಿಎಂಸಿ ಈಗಾಗಲೇ ಬಿಜೆಪಿ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿದೆʼ ಎಂದು ಎಂದು ಪಶ್ಚಿಮ ಬಂಗಾಳ ಸಚಿವೆ ಮತ್ತು ಟಿಎಂಸಿ ವಕ್ತಾರರಾದ ಶಶಿ ಪಂಜಾ ಹೇಳಿದ್ದಾರೆ.

ಸಂದೇಶಖಾಲಿಯ ಕೆಲವು ವಿಡಿಯೋಗಳು ವೈರಲ್ ಆಗಿದ್ದು, ಅದನ್ನು ಟಿಎಂಸಿ ಹಂಚಿಕೊಂಡಿದೆ. ಟಿಎಂಸಿ ಹಂಚಿಕೊಂಡಿರುವ ವಿಡಿಯೋಗಳ ಸತ್ಯಾಸತ್ಯತೆ ಪರಿಶೀಲನೆ ಆಗಬೇಕಿದೆ.

Read More
Next Story