ಕೇಜ್ರಿವಾಲ್ ಬಂಧನ: ಇಡಿ ಪ್ರಶ್ನಿಸಿದ ಸುಪ್ರೀಂ
ನವದೆಹಲಿ, ಏ. 30- ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಾರ್ವತ್ರಿಕ ಚುನಾವಣೆಗೆ ಮುನ್ನ ಬಂಧಿಸಿರುವುದನ್ನು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯ ಉತ್ತರ ನೀಡಬೇಕೆಂದು ಕೇಳಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ, ʻಜೀವನ ಮತ್ತು ಸ್ವಾತಂತ್ರ್ಯ ಅತ್ಯಂತ ಮಹತ್ವದ್ದು.ನೀವು ಅದನ್ನು ನಿರಾಕರಿಸಲು ಸಾಧ್ಯವಿಲ್ಲʼ ಎಂದು ಹೇಳಿತಲ್ಲದೆ, ಬಂಧನದ ಸಮಯ ಕುರಿತು ಉತ್ತರಿಸಬೇಕೆಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರಿಗೆ ಹೇಳಿತು. ತನಿಖಾ ಸಂಸ್ಥೆ ಅರ್ಜಿಯ ವಿಚಾರಣೆಯ ಮುಂದಿನ ದಿನಾಂಕದಂದು ಉತ್ತರಿಸಬೇಕಿದೆ. ವಿಷಯವನ್ನು ಶುಕ್ರವಾರ ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಿದ ನಂತರ, ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
Next Story