ಬಸ್ತಾರ್ ಪ್ರದೇಶದಲ್ಲಿ ಗುಂಡಿನ ಚಕಮಕಿ: ಏಳು ಮಾವೋವಾದಿಗಳ ಹತ್ಯೆ
x

ಬಸ್ತಾರ್ ಪ್ರದೇಶದಲ್ಲಿ ಗುಂಡಿನ ಚಕಮಕಿ: ಏಳು ಮಾವೋವಾದಿಗಳ ಹತ್ಯೆ


ಏಪ್ರಿಲ್ 30- ಛತ್ತೀಸ್‌ಗಢದ ಬಸ್ತಾರ್ ಪ್ರದೇಶದ ಅಬುಜ್ಮದ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮಾವೋವಾದಿ ಗುಂಪಿನ ಏಳು ಸದಸ್ಯರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.

ಕಂಕೇರ್ ಮತ್ತು ನಾರಾಯಣಪುರ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್ಮದ್‌ನಲ್ಲಿ ಬೆಳಗ್ಗೆ 6 ಗಂಟೆಗೆ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆ ಭಾಗವಾಗಿ ಜಿಲ್ಲಾ ಮೀಸಲು ಕಾವಲು ಪಡೆ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಹುಡುಕಾಟ ನಡೆಸುತ್ತಿದ್ದಾಗ, ಟೆಕ್ಮೆಟಾ ಮತ್ತು ಕಾಕೂರ್ ಗ್ರಾಮಗಳ ಸುತ್ತಮುತ್ತ ಘರ್ಷಣೆ ನಡೆಯಿತು. ಬಳಿಕ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಎಕೆ-47 ಅಸಾಲ್ಟ್ ರೈಫಲ್, ವಿವಿಧ ರೀತಿಯ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳು ಸೇರಿವೆ.

ನಕ್ಸಲ್ ವಿರೋಧಿ ಕಾರ್ಯಾಚರಣೆ ತೀವ್ರ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಛತ್ತೀಸ್‌ಗಢದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ತೀವ್ರಗೊಂಡಿದೆ. ಭದ್ರತಾ ಪಡೆಗಳು ಬಂಡುಕೋರ ಚಟುವಟಿಕೆಗಳ ವಿರುದ್ಧ ಕಠಿಣ ನಿಲುವು ಪ್ರದರ್ಶಿಸುತ್ತಿವೆ. ಈ ವರ್ಷ 88 ಮಾವೋವಾದಿಗಳ ಹತ್ಯೆ ನಡೆದಿದೆ. ಏಪ್ರಿಲ್ 16 ರಂದು ಕಂಕೇರ್ ಜಿಲ್ಲೆಯಲ್ಲಿ ನಡೆದ ಭಾರೀ ಚಕಮಕಿಯಲ್ಲಿ 29 ಮಾವೋವಾದಿಗಳು ಸಾವನ್ನಪ್ಪಿದರು.

Read More
Next Story