ಬಿಜೆಪಿಯವರಂತೆ ಸುಳ್ಳು ಹೇಳಲ್ಲ, ‌ರಾಜ್ಯದ 20 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ: ಸಿದ್ದರಾಮಯ್ಯ
x

ಬಿಜೆಪಿಯವರಂತೆ ಸುಳ್ಳು ಹೇಳಲ್ಲ, ‌ರಾಜ್ಯದ 20 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ: ಸಿದ್ದರಾಮಯ್ಯ

ನಾವು ಬಿಜೆಪಿ ಅವರಂತೆ ಸುಳ್ಳು ಹೇಳುವುದಿಲ್ಲ. 28ರಲ್ಲಿ 28 ಕ್ಷೇತ್ರ ಗೆಲ್ಲಲು ಸಾಧ್ಯವೇ?. ಆದರೆ, 20ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಮೈಸೂರು: ರಾಜ್ಯದ 28 ಕ್ಷೇತ್ರಗಳಲ್ಲಿ 20 ಕ್ಷೇತರಗಳಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ನಾವು ಬಿಜೆಪಿ ಅವರಂತೆ ಸುಳ್ಳು ಹೇಳುವುದಿಲ್ಲ. 28ರಲ್ಲಿ 28 ಕ್ಷೇತ್ರ ಗೆಲ್ಲಲು ಸಾಧ್ಯವೇ?. ಆದರೆ, 20ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ. ಹಾಗಾಗಿ, ಜನರು ನಮ್ಮ ಕೈ ಹಿಡಿಯುತ್ತಾರೆ. ಅಧಿಕಾರಕ್ಕೆ ಬಂದ ಕೂಡಲೇ ಕೆಲಸ ಮಾಡಲು ಪ್ರಾರಂಭಿಸಿದ್ದೇವೆ. ಬಿಜೆಪಿಯವರು ನೀಡಿದ 600 ಭರವಸೆಗಳಲ್ಲಿ ಶೇ.10 ರಷ್ಟೂ ಪೂರ್ತಿ ಮಾಡಿಲ್ಲ. ಮೋದಿಯವರು 15ಲಕ್ಷ ರೂ. ಕೊಟ್ರಾ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ರಾ? ರೈತರ ಆದಾಯ ದ್ವಿಗುಣ ಮಾಡಿದ್ರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಟಿಕೆಟ್‌ ಹಂಚಿಕೆಯಲ್ಲಿ ಯಾವ ಕಗ್ಗಂಟೂ ಆಗಿಲ್ಲ. ನಾಳೆ ಅಥವಾ ನಾಡಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಈ ಹಿಂದೆ ನಾವು ಜೆಡಿಎಸ್‌ ಜೊತೆ ಮೈತ್ರಿ ಆಗಿದ್ದಾಗ ನಮಗೆ ಅನಾನುಕೂಲ ಆಗಿತ್ತು. ಈ ಬಾರಿ ಜೆಡಿಎಸ್‌-ಬಿಜೆಪಿ ಮೈತ್ರಿ ಆಗಿರುವುದರಿಂದ ನಮಗೆ ಅನುಕೂಲ ಆಗಲಿದೆ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಕ್ಷೇತರ ಗೆಲ್ಲದಿದ್ದರೆ ಸಿದ್ದರಮಯ್ಯ ಅವರು ರಾಜಿನಾಮೆ ನೀಡಬೇಕು ಎಂದು ಶಾಸಕ ಗುಬ್ಬಿ ಶ್ರೀನಿವಾಸ್‌ ಹೇಳಿದ್ದಾರೆನ್ನಲಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗುಬ್ಬಿ ಶ್ರೀನಿವಾಸ್‌ ಹೇಳಿಕೆಯನ್ನು ಸಂಪೂರ್ಣವಾಗಿ ತೋರಿಸಿಲ್ಲ, ಅರ್ಧ ಮಾತ್ರ ಹಾಕಿದ್ದೀರಿ. ಸಿದ್ದರಾಮಯ್ಯ ಬಡವರ ಪರವಾಗಿ ಕೆಲಸ ಮಾಡಿದ್ದಾರೆ, ಅವರನ್ನು ಬೆಂಬಲಿಸಬೇಕು ಎಂದಿದ್ದಾರೆ, ಅದನ್ನು ಬಿಟ್ಟು ಬೇರೇನನ್ನೂ ಅವರು ಹೇಳಿಲ್ಲ ಎಂದು ಸಿಎಂ ತಿಳಿಸಿದರು.

Read More
Next Story